ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು 5 ಲಕ್ಷ ರೂ. ಗಳಿಗೆ ಏರಿಕೆ ಮಾಡುವುದಾಗಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಪ್ರಸ್ತುತ ಪರಿಶಿಷ್ಟ ಜಾತಿಯ ಪ್ರತಿ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ 1.70 ಲಕ್ಷ. ರೂ. ನೆರವು ನೀಡಲಾಗುತ್ತದೆ. ಇದರಿಂದ ಉತ್ತಮ ಮನೆ ನಿರ್ಮಾಣ ಅಸಾಧ್ಯ. ಆದ್ದರಿಂದ ಫಲಾನುಭವಿಗಳಿಗೆ 5 ಲಕ್ಷ ರೂ. ಅನುದಾನ ನೀಡಲು ಕೋರಿ ಮುಖ್ಯಮಂತ್ರಿಯವರಿಗೆ ಶೀಘ್ರದಲ್ಲಿಯೇ ಪ್ರಸ್ತಾವನೆ ಸಲ್ಲಿಸುವುದಾಗಿ ಸಚಿವರು ಹೇಳಿದ್ದಾರೆ.
ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಉತ್ತಮ ಮನೆ, ಶೌಚಾಲಯ ವ್ಯವಸ್ಥೆ, ಶುದ್ಧ ಕುಡಿಯುವ ನೀರು ಒದಗಿಸುವುದು, ವಿದ್ಯುತ್ ವ್ಯವಸ್ಥೆ, ಗುಣಮಟ್ಟದ ಆರೋಗ್ಯ ಸೌಕರ್ಯ ಒದಗಿಸುವುದು, ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಭರವಸೆಯನ್ನು ಅವರು ಇದೇ ಸಂದರ್ಭದಲ್ಲಿ ನೀಡಿದ್ದಾರೆ. ಪಾರದರ್ಶಕವಾಗಿ ಸಮಾಜ ಕಲ್ಯಾಣ ಇಲಾಖೆಯ ಎಲ್ಲಾ ಕೆಲಸಗಳು ನಡೆಯುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.