ಬೆಂಗಳೂರು: 2020 -21 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಅವರು ಈ ಫಲಿತಾಂಶ ಪಟ್ಟಿ ಪ್ರಕಟಿಸಿದ್ದು, ಸರ್ಕಾರ ಈ ಹಿಂದೆಯೇ ತಿಳಿಸಿದ್ದಂತೆ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲಾಗಿದೆ. ಈ ಬಾರಿ ಒಟ್ಟು 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅಂಕ ಆಧಾರದಲ್ಲಿ ಇಂದು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲಾಗಿದೆ.
ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ವಿಶಿಷ್ಟ ರೀತಿಯಲ್ಲಿ ಆರು ವಿಷಯಗಳನ್ನು ಎರಡೇ ಪರೀಕ್ಷೆಗಳನ್ನು ನಡೆಸುವ ಮೂಲಕ ಆಯೋಜಿಸಲಾಗಿತ್ತು. ಈ ಪರೀಕ್ಷಾ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಪರೀಕ್ಷೆಯಲ್ಲಿ ಬಾಲಕರು ಮೇಲುಗೈ ಸಾಧಿಸಿದ್ದಾರೆ.
ಎ + ಶ್ರೇಣಿಯಲ್ಲಿ 16.25% ವಿದ್ಯಾರ್ಥಿಗಳು, ಎ ಶ್ರೇಣಿಯಲ್ಲಿ 32% ವಿದ್ಯಾರ್ಥಿಗಳು, ಬಿ ಶ್ರೇಣಿಯಲ್ಲಿ 36.86% ವಿದ್ಯಾರ್ಥಿಗಳು, ಸಿ ಶ್ರೇಣಿಯಲ್ಲಿ 14.55% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 625 ಕ್ಕೆ 625 ಅಂಕಗಳನ್ನು 157 ವಿದ್ಯಾರ್ಥಿಗಳು ಪಡೆದಿದ್ದಾರೆ.
ಪ್ರಥಮ ಭಾಷೆ 125/125 ಅಂಕಗಳನ್ನು 25,302 ವಿದ್ಯಾರ್ಥಿಗಳು ಗಳಿಸಿದ್ದು, ದ್ವಿತೀಯ ಭಾಷೆ 100/100 ಅಂಕಗಳನ್ನು 36,628 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ತೃತಿಯ ಭಾಷೆ 100/100 ಅಂಕಗಳನ್ನು 36,776 ವಿದ್ಯಾರ್ಥಿಗಳು ಪಡೆದಿದ್ದಾರೆ.
ಈ ಫಲಿತಾಂಶವನ್ನು sslc.karnataka.gov.in or kseeb.kar.nic.in ಅಥವಾ karresults.nic.in ಮೂಲಕ ಪರಿಶೀಲಿಸಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.