ಮೈಸೂರು: ಬಿಜೆಪಿ ಪಕ್ಷ ವಿಶ್ವದಲ್ಲೇ ಅತೀ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ. ಪ್ರಧಾನಿ ಮೋದಿ, ಮಾಜಿ ಸಿಎಂ ಬಿಎಸ್ವೈ ಸೇರಿದಂತೆ ಹಲವು ನಾಯಕರು ಈ ಪಕ್ಷವನ್ನು ಕಳೆದ 40 ವರ್ಷಗಳಿಂದ ಗಟ್ಟಿಗೊಳಿಸಿದ್ದಾರೆ. ಪಕ್ಷ ನಿಷ್ಠೆ, ಪಕ್ಷದ ಕಾರ್ಯಕ್ರಮಗಳ ಅನುಷ್ಠಾನ ನಮ್ಮೆಲ್ಲರ ಸಂಕಲ್ಪವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಾರ್ಯಕರ್ತರ ಶ್ರಮವೇ ಪಕ್ಷ ಅಧಿಕಾರಕ್ಕೆ ಬರಲು ಕಾರಣ. ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ, ಮನವರಿಕೆ ಮಾಡುವ ಕೆಲಸವನ್ನು ಕಾರ್ಯಕರ್ತರು ನಿರಂತರವಾಗಿ ಮಾಡುತ್ತಾ ಬಂದಿದ್ದಾರೆ ಎಂದು ಅವರು ಹೇಳಿದ್ದಾರೆ.
ರಾಜ್ಯ ಸರ್ಕಾರ ಕೊರೋನಾ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿದೆ. ಆರೋಗ್ಯ ಮೂಲಸೌಕರ್ಯಗಳ ವೃದ್ಧಿಯ ಮೂಲಕ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯ ಕ್ರಮ ಕೈಗೊಂಡಿದೆ. 2 ಸಾವಿರ ವೈದ್ಯರ ನೇಮಕವಾಗಿದೆ. ಕೊರೋನಾ ವಿರುದ್ಧ ಸರ್ಕಾರ ದೊಡ್ಡ ಮಟ್ಟದ ಸಮರವನ್ನೇ ಸಾರಿದೆ ಎಂದಿದ್ದಾರೆ. ಹಾಗೆಯೇ ಕೊರೋನಾ ನಡುವೆಯೂ ಆರ್ಥಿಕ ಚಟುವಟಿಕೆ ಮತ್ತೆ ಉತ್ಸಾಹ ಪಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಕೊರೋನಾ ನಿರ್ವಹಣೆ ಕಾರ್ಯ ನಡೆಯುತ್ತಿದೆ. ಎಲ್ಲಾ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸಲಾಗಿದೆ. ಕೃಷಿ, ಆರೋಗ್ಯ, ನಗರ, ಗ್ರಾಮೀಣಾಭಿವೃದ್ಧಿ, ಸ್ಮಾರ್ಟ್ ಸಿಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.