ನವದೆಹಲಿ: ಕೊರೋನಾ ಸಾಂಕ್ರಾಮಿಕ ಸೋಂಕು ಎದುರಿಸಲು ನೆರೆ ಬಾಂಗ್ಲಾದೇಶಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೂವತ್ತು 109 ಲೈಫ್ ಸಪೋರ್ಟ್ ಆಂಬ್ಯುಲೆನ್ಸ್ಗಳನ್ನು ಉಡುಗೊರೆಯಾಗಿ ಕಳುಹಿಸಿಕೊಟ್ಟಿದೆ.
ಬಾಂಗ್ಲಾದೇಶಕ್ಕೆ ಆಂಬ್ಯುಲೆನ್ಸ್ ನೀಡುವುದಾಗಿ ಈ ಹಿಂದೆಯೇ ಪ್ರಧಾನಿ ಮೋದಿ ಅವರು ತಿಳಿಸಿದ್ದು, ಅದರಂತೆ ಆಗಸ್ಟ್ 7 ರಂದು ಅವರು ಜೀವ ರಕ್ಷಕ ಆಂಬ್ಯುಲೆನ್ಸ್ಗಳನ್ನು ಬಾಂಗ್ಲಾದೇಶಕ್ಕೆ ಕಳುಹಿಸಿಕೊಟ್ಟಿದ್ದಾರೆ. ಈ ಆಂಬ್ಯುಲೆನ್ಸ್ಗಳು ಅಲ್ಲಿನ ಬೆನಪೋಲ್ ಬಂದರನ್ನು ತಲುಪಿವೆ ಎಂದು ಮೂಲಗಳು ಹೇಳಿವೆ.
ಈ ಹಿಂದೆಯೂ ಭಾರತ ಬಾಂಗ್ಲಾದೇಶಕ್ಕೆ ಒಂದು ಆಂಬ್ಯುಲೆನ್ಸ್ ನೀಡಿದ್ದು, ಆ ಮೂಲಕ ಈ ವರೆಗೆ ಒಟ್ಟು 31 ಆಂಬ್ಯುಲೆನ್ಸ್ಗಳನ್ನು ಪ್ರಧಾನಿ ಮೋದಿ ಸರ್ಕಾರ ಬಾಂಗ್ಲಾದೇಶಕ್ಕೆ ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಉಡುಗೊರೆ ನೀಡಿದೆ. ಕಸ್ಟಮ್ಸ್ ಮತ್ತು ಸಿ ಆಂಡ್ ಎಫ್ ದಾಖಲೆಗಳ ಕಾರ್ಯ ಪೂರ್ಣಗೊಂಡ ಬಳಿಕ ಈ ಆಂಬ್ಯುಲೆನ್ಸ್ಗಳನ್ನು ಬೆನಪೋಲ್ ಬಂದರಿನಿಂದ ಡಾಕಾಗೆ ಕೊಂಡೊಯ್ಯಲಾಗುತ್ತದೆ ಎಂದು ಬಂದರಿನ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.