ನವದೆಹಲಿ: ಸತತ ಮೂರನೇ ವರ್ಷವೂ ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಭಾರತ ಮತ್ತು ಮಧ್ಯ ಏಷ್ಯಾದ ‘ಅತ್ಯುತ್ತಮ ವಿಮಾನ ನಿಲ್ದಾಣ’ ಎಂಬ ಕೀರ್ತಿಗೆ ಭಾಜನವಾಗಿದೆ.
ಈ ಗೌರವವನ್ನು ಏರ್ಪೋರ್ಟ್ ಉದ್ಯಮಕ್ಕೆ ಸಂಬಂಧಿಸಿದಂತೆ ಪ್ರತಿಷ್ಠಿತ ಪ್ರಶಸ್ತಿಯಾದ ‘ಸ್ಕೈಟ್ರ್ಯಾಕ್ಸ್ ವರ್ಲ್ಡ್ ಏರ್ಪೋರ್ಟ್ ಅವಾರ್ಡ್’ ನಡೆಸಿರುವ ಜಾಗತಿಕ ವಿಮಾನ ನಿಲ್ದಾಣ ಗ್ರಾಹಕರ ತೃಪ್ತಿ ಸಮೀಕ್ಷೆಯಲ್ಲಿ, ವಿಶ್ವದ ಅಗ್ರ 50 ವಿಮಾನ ನಿಲ್ದಾಣಗಳಲ್ಲಿ ಭಾರತದ ನವದೆಹಲಿ ವಿಮಾನ ನಿಲ್ದಾಣಕ್ಕೂ ಸ್ಥಾನ ದೊರೆತಿದೆ.
ಈ ವಿಮಾನ ನಿಲ್ದಾಣ ವಿಶ್ವದ ಅಗ್ರ ವಿಮಾನ ನಿಲ್ದಾಣಗಳಲ್ಲಿ ಸ್ಥಾನ ಪಡೆದ ಭಾರತದ ಏಕೈಕ ವಿಮಾನ ನಿಲ್ದಾಣವಾಗಿದೆ. ಈ ವಿಮಾನ ನಿಲ್ದಾಣವನ್ನು ನಿರ್ವಹಣೆ ಮಾಡುತ್ತಿರುವ ಜಿಎಂಆರ್ ನೇತೃತ್ವದ ಒಕ್ಕೂಟ ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿ. ಈ ಘೋಷಣೆಯನ್ನು ಮಾಡಿದೆ. ಜಾಗತಿಕ ಸಾಂಕ್ರಾಮಿಕ ಸಮಯದಲ್ಲಿ ಮಾದರಿ ಸುರಕ್ಷತಾ ಪ್ರೊಟೋಕಾಲ್ಗಳನ್ನು ಒದಗಿಸಿದ್ದಕ್ಕೆ ಈ ವಿಮಾನ ನಿಲ್ದಾಣಕ್ಕೆ ‘ಕೋವಿಡ್ 19 ಏರ್ಪೋರ್ಟ್ ಎಕ್ಸಲೆನ್ಸ್ ಅವಾರ್ಡ್’ ನೀಡಲಾಗಿದೆ.
ಈ ಬಾರಿ ಈ ವಿಮಾನ ನಿಲ್ದಾಣ ವಿಶ್ವದ ಅಗ್ರ 50 ನಿಲ್ದಾಣಗಳಲ್ಲಿ 45 ನೇ ಸ್ಥಾನ ತನ್ನದಾಗಿಸಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.