ನವದೆಹಲಿ: ದೇಶದಲ್ಲಿ ಫಾಸ್ಟ್ಯಾಗ್ ನಿಯಮ ಜಾರಿಗೊಂಡ ಬಳಿಕ ಟೋಲ್ ಸಂಗ್ರಹದಲ್ಲಿ 96% ಸುಧಾರಣೆ ಕಂಡಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಮತ್ತು ಟ್ರಾಫಿಕ್ ಎಲೆಕ್ಟ್ರಾನಿಕ್ ಟೋಲ್ ಕಲೆಕ್ಷನ್ (ಇಟಿಸಿ) ವ್ಯವಸ್ಥೆಯ ತಡೆರಹಿತ ಚಲನೆಯನ್ನು ಖಚಿತ ಪಡಿಸಿಕೊಳ್ಳಲು ಪ್ಯಾನ್ ಇಂಡಿಯಾ ಆಧಾರದಲ್ಲಿ ಪ್ಯಾಸಿವ್ ರೆಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್ ತಂತ್ರಜ್ಞಾನ ಅಳವಡಿಸಲಾಗಿದೆ. ಈ ವ್ಯವಸ್ಥೆಯ ಅಳವಡಿಕೆಯ ಬಳಿಕ 96% ಗಳಷ್ಟು ಟೋಲ್ ಸಂಗ್ರಹ ವ್ಯವಸ್ಥೆ ಸುಧಾರಣೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಡಿಜಿಟಲ್ ವ್ಯವಸ್ಥೆ ಮೂಲಕ ಪಾವತಿ ಸಂಗ್ರಹಕ್ಕೆ ಅನುಕೂಲವಾಗುವಂತೆ ತಡೆ ರಹಿತ ಸಂಚಾರ ವ್ಯವಸ್ಥೆಯನ್ನು ಒದಗಿಸುವ ನಿಟ್ಟಿನಲ್ಲಿ ಫಾಸ್ಟ್ಯಾಗ್ ವ್ಯವಸ್ಥೆ ಅಳವಡಿಸಲಾಗಿದೆ. ದೇಷದ ಎಲ್ಲಾ ಟೋಲ್ಗಳಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು 15 ಫೆಬ್ರವರಿ 2021 ರಂದು ಅನುಷ್ಠಾನ ಮಾಡಲಾಗಿದೆ. ಸರ್ಕಾರ ಟೋಲ್ ವ್ಯವಸ್ಥೆಗೆ ಸಂಬಂಧಿಸಿದಂತೆ ಸುಧಾರಣೆ ತರಲು ಸತತವಾಗಿ ಪ್ರಯತ್ನ ನಡೆಸುತ್ತಿದೆ.
ಕಳೆದ ಮಾರ್ಚ್ ತಿಂಗಳಲ್ಲಿ ಗಡ್ಕರಿ ಅವರು, ಮುಂದಿನ ಒಂದು ವರ್ಷದೊಳಗಾಗಿ ಸಂಪೂರ್ಣ ಜಿಪಿಎಸ್ ಆಧರಿತ ಟೋಲ್ ವ್ಯವಸ್ಥೆ ಆರಂಭಿಸಲು ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದ್ದರು. ಎಲ್ಲಾ ರೀತಿಯ ಭೌತಿಕ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಒಂದು ವರ್ಷದೊಳಗಾಗಿ ತೆಗೆದು ಹಾಕಲಾಗುವುದು. ಜಿಪಿಎಸ್ ಮೂಲಕ ಟೋಲ್ ಸಂಗ್ರಹ ನಡೆಯಲಿರುವುದಾಗಿ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.