ನವದೆಹಲಿ: ವಿಶ್ವ ಸಿಂಹ ದಿನದ ಹಿನ್ನಲೆ ಪ್ರಧಾನಿ ಮೋದಿ ಅವರು ಶುಭಾಶಯ ಕೋರಿದ್ದಾರೆ. ಕೆಲ ವರ್ಷಗಳಿಂದೀಚೆಗೆ ದೇಶದಲ್ಲಿ ಸಿಂಹಗಳ ಸಂಖ್ಯೆ ಏರಿಕೆಯಾಗುತ್ತಿರುವ ಕುರಿತು ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸಿಂಹವು ಗಂಭೀರ ಮತ್ತು ಧೈರ್ಯಶಾಲಿ ಪ್ರಾಣಿಯಾಗಿದೆ. ಏಷ್ಯಾಟಿಕ್ ಸಿಂಹಗಳ ತವರೂರು ಎಂಬ ಹಿರಿಮೆ ಭಾರತಕ್ಕಿದೆ ಎಂದು ಹೇಳಿದ್ದಾರೆ. ವಿಶ್ವ ಸಿಂಹ ದಿನದಂದು ಸಿಂಹಗಳ ಸಂರಕ್ಷಣೆ ಬಗ್ಗೆ ಉತ್ಸುಕರಾಗಿರುವ ಎಲ್ಲರಿಗೂ ನನ್ನ ಶುಭಾಶಯಗಳು. ಕಳೆದ ಕೆಲ ವರ್ಷಗಳಿಂದ ಭಾರತದಲ್ಲಿ ಸಿಂಹಗಳ ಸಂಖ್ಯೆಯಲ್ಲಿ ಸ್ಥಿರವಾದ ಏರಿಕೆ ಕಂಡು ಬಂದಿದೆ ಎಂಬುದನ್ನು ತಿಳಿಸಲು ಸಂತೋಷವಾಗುತ್ತದೆ ಎಂದು ಅವರು ಹೇಳಿದ್ದಾರೆ.
ಗುಜರಾತ್ನ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ, ಗಿರ್ ಸಿಂಹಗಳಿಗೆ ಸುರಕ್ಷಿತ ಮತ್ತು ನಿರ್ಭೀತ ಆವಾಸಸ್ಥಾನಗಳನ್ನು ಖಾತ್ರಿಪಡಿಸುವತ್ತ ಕೆಲಸ ಮಾಡಲು ನನಗೆ ಅವಕಾಶ ದೊರೆತಿತ್ತು. ಸಿಂಹಗಳ ಆವಾಸಸ್ಥಾನಗಳು ಸುರಕ್ಷಿತವಾಗಿವೆಯೇ, ಪ್ರವಾಸೋದ್ಯಮಕ್ಕೆ ಉತ್ತೇಜನ ದೊರೆಯುತ್ತಿದೆಯೇ ಎಂಬುದನ್ನು ಖಚಿತ ಪಡಿಸಿಕೊಳ್ಳಲು ಸ್ಥಳೀಯ ಸಮುದಾಯಗಳ ಮಟ್ಟದಲ್ಲಿ, ಜಾಗತಿಕವಾಗಿ ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮೋದಿ ತಿಳಿಸಿದ್ದಾರೆ.
The lion is majestic and courageous. India is proud to be home to the Asiatic Lion. On World Lion Day, I convey my greetings to all those passionate about lion conservation. It would make you happy that the last few years have seen a steady increase in India’s lion population. pic.twitter.com/GaCEXnp7hG
— Narendra Modi (@narendramodi) August 10, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.