ನವದೆಹಲಿ: ಮೀಸಲಾತಿಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಬಲವಾಗಿ ಬೆಂಬಲಿಸುತ್ತದೆ ಎಂದು ಆರ್ಎಸ್ಎಸ್ ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆ ತಿಳಿಸಿದ್ದಾರೆ.
ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸುವವರೆಗೂ ಮೀಸಲಾತಿ ಮುಂದುವರಿಯಬೇಕು. ಆರ್ಎಸ್ಎಸ್ ಹಿಂದಿನಿಂದಲೂ ಮೀಸಲಾತಿಯನ್ನು ಬೆಂಬಲಿಸುತ್ತಾ ಬಂದಿದೆ. ಸಾಮಾಜಿಕ ಸಾಮರಸ್ಯ, ಸಾಮಾಜಿಕ ನ್ಯಾಯ ನಮಗೆ ರಾಜಕೀಯದ ವಿಷಯವಲ್ಲ. ಬದಲಾಗಿ ಇವೆರಡೂ ನಮಗೆ ನಂಬಿಕೆಯ ಅಂಶಗಳಾಗಿವೆ ಎಂದು ಹೊಸಬಾಳೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೇಶದ ಇತಿಹಾಸ ದಲಿತರ ಇತಿಹಾಸಕ್ಕಿಂತ ಭಿನ್ನವಾಗಿಲ್ಲ. ದಲಿತರ ಇತಿಹಾಸದ ಹೊರತಾಗಿ ದೇಶದ ಇತಿಹಾಸ ಪೂರ್ಣವಾಗುವುದಿಲ್ಲ. ಅವರು ಸಮಾಜಿಕ ಬದಲಾವಣೆಯ ವಿಚಾರದಲ್ಲಿ ಮುಂಚೂಣಿಯಲ್ಲಿರುವವರು ಎಂದು ಅವರು ಹೇಳಿದ್ದಾರೆ. ಸಮಾಜದ ಎಲ್ಲ ವರ್ಗಗಳು ಮತ್ತು ಮೀಸಲಾತಿ ನಡುವಿನ ಸಮನ್ವಯ ಜೊತೆಯಾಗಿ ಸಾಗಬೇಕು ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.