ಬೆಂಗಳೂರು: ಮಂಗಳವಾರ ರಾಜ್ಯದಲ್ಲಿ 1.26 ಲಕ್ಷ ಜನರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ಈ ವರೆಗೆ ರಾಜ್ಯದಲ್ಲಿ ಸುಮಾರು 4 ಕೋಟಿಗಳಷ್ಟು ಜನರಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಕೊರೋನಾ ಮೊದಲನೇ ಅಲೆಯ ಸಂದರ್ಭದಲ್ಲಿ 1.41 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿತ್ತು. ಎರಡನೇ ಅಲೆಯ ಈ ಏಳು ತಿಂಗಳಲ್ಲಿ 2.59 ಕೋಟಿ ಜನರಿಗೆ ಸೋಂಕು ಪರೀಕ್ಷೆ ನಡೆಸಲಾಗಿದೆ. 37 ಲಕ್ಷ ರ್ಯಾಪಿಡ್ ಆಂಟಿಜೆನ್ ಪರೀಕ್ಷೆಗಳನ್ನು ನಡೆಸಲಾಗಿದೆ. ಕೊರೋನಾ ಮೂರನೇ ಅಲೆಯ ಭೀತಿಯಲ್ಲಿ ಮತ್ತಷ್ಟು ಹೆಚ್ಚು ಪರೀಕ್ಷೆಗಳನ್ನು ನಡೆಸುವಂತೆ ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ. ಇದರನ್ವಯ ಕಳೆದ ಮೂರು ತಿಂಗಳಿನಿಂದ ಪ್ರತಿನಿತ್ಯ ಸರಾಸರಿ 1.50 ಲಕ್ಷ ಪರೀಕ್ಷೆಗಳನ್ನು ರಾಜ್ಯದಲ್ಲಿ ನಡೆಸಲಾಗುತ್ತಿದೆ.
ಸದ್ಯ ನೆರೆಯ ರಾಜ್ಯ ಕೇರಳ, ಮಹಾರಾಷ್ಟ್ರಗಳಲ್ಲಿ ಕೊರೋನಾ ಸೋಂಕು ಏರಿಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ಈ ರಾಜ್ಯಗಳ ಜೊತೆಗೆ ಗಡಿ ಹಂಚಿಕೊಂಡಿರುವ ಜಿಲ್ಲೆಗಳಲ್ಲಿಯೂ ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಹಾಗೆಯೇ ಕೊರೋನಾ ಮತ್ತೆ ಉಲ್ಬಣವಾಗದಂತೆ ನಿಯಂತ್ರಣ ಮಾಡಲು ರಾಜ್ಯದಲ್ಲಿ ಮುಂಜಾಗ್ರತಾ ಕ್ರಮಗಳನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.