ನವದೆಹಲಿ: ಈ ವರೆಗೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದಂತೆ 53.24 ಕೋಟಿ ಡೋಸ್ ಕೊರೋನಾ ಲಸಿಕೆ ವಿತರಣೆ ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕೇಂದ್ರಾಡಳಿತ ಪ್ರದೇಶಗಳು ಮತ್ತು ರಾಜ್ಯಗಳಿಗೆ 53,24,44,960 ಕೋಟಿ ಪ್ರಮಾಣದ ಲಸಿಕೆ ಪೂರೈಕೆ ಮಾಡಲಾಗಿದ್ದು, ಪ್ರಸ್ತುತ ಕೇಂದ್ರಾಡಳಿತ ಪ್ರದೇಶಗಳು ಮತ್ತು ರಾಜ್ಯಗಳಲ್ಲಿ ಬಳಕೆಯಾಗದೆ ಉಳಿದಿರುವ 2,25,03,900 ಡೋಸ್ ಕೊರೋನಾ ಲಸಿಕೆಗಳಿರುವುದಾಗಿಯೂ ಸಚಿವಾಲಯ ತನ್ನ ವರದಿಯಲ್ಲಿ ಹೇಳಿದೆ.
ಲಭ್ಯ ಮಾಹಿತಿಗಳ ಪ್ರಕಾರ, ತ್ಯಾಜ್ಯಗಳು ಸೇರಿದಂತೆ ಒಟ್ಟು 51,56,11,035 ಪ್ರಮಾಣದ ಲಸಿಕೆಗಳನ್ನು ಬಳಕೆ ಮಾಡಲಾಗಿದೆ. ಮುಂದಿನ ಕೆಲವೇ ದಿನಗಳಲ್ಲಿ 72,40,250 ಡೋಸ್ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಸಚಿವಾಲಯ ಹೇಳಿದೆ.
ದೇಶದಲ್ಲಿ ಕಳೆದ ಜನವರಿ 16 ರಿಂದ ಸ್ವದೇಶಿ ಲಸಿಕೆ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗಳ ಬಳಕೆಗೆ ಪ್ರಧಾನಿ ಮೋದಿ ಅವರು ಚಾಲನೆ ನೀಡಿದ್ದಾರೆ. ಮೊದಲ ಹಂತದಲ್ಲಿ ಕೊರೋನಾ ವಾರಿಯರ್ಸ್ಗಳಿಗೆ, ಎರಡನೇ ಹಂತದಲ್ಲಿ ವೃದ್ಧರಿಗೆ, ಆ ಬಳಿಕ 45 ವರ್ಷ ಮೇಲ್ಪಟ್ಟವರಿಗೆ, ನಂತರದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.