ಬೆಂಗಳೂರು: ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿಯ ಜಲಶಕ್ತಿ ಅಭಿಯಾನದಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ಮೊದಲ ಸ್ಥಾನ ದೊರೆತಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.
ಈ ಯೋಜನೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ವೆಚ್ಚದಲ್ಲಿ 65% ಗಳನ್ನು ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆ, ಕಾಮಗಾರಿಗಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಯೋಜನೆಗಾಗಿ ಪ್ರಸಕ್ತ ಸಾಲಿನಲ್ಲಿ 29,34,32 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಅದರಲ್ಲಿ 240850 ಕೋಟಿ ರೂ. ಗಳನ್ನು ಜಲಶಕ್ತಿ ಅಭಿಯಾನಕ್ಕೆ ಬಳಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಜಲಶಕ್ತಿ ಅಭಿಯಾನ ಆರಂಭವಾದಾಗಿನಿಂದ ಈ ವರೆಗೆ ರಾಜ್ಯವು 4.87 ಲಕ್ಷ ಜಲ ಸಂರಕ್ಷಣೆ ಕಾಮಗಾರಿಗಳನ್ನು ಕೈಗೊಂಡಿದೆ. ಇದರಲ್ಲಿ 2.38 ಲಕ್ಷ ಕಾಮಗಾರಿಗಳನ್ನು ಸಂಪೂರ್ಣಗೊಳಿಸಲಾಗಿದ್ದು, ಆ ಮೂಲಕ ದೇಶದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.