ಮಂಗಳೂರು: ನಗರದಲ್ಲಿ ಎನ್ಐಎ ಕಚೇರಿ ಮತ್ತು ಸೇನಾ ಶಿಬಿರಗಳನ್ನು ಸ್ಥಾಪಿಸಬೇಕು ಎಂಬ ಬೇಡಿಕೆಯನ್ನು ವಿಶ್ವ ಹಿಂದೂ ಪರಿಷತ್ ಪುನರುಚ್ಚರಿಸಿದೆ.
ಉಳ್ಳಾಲದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ, ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದೇಶ ವಿರೋಧಿ ಕೃತ್ಯಗಳನ್ನು ವಿರೋಧಿಸಿ ಪ್ರತಿಭಟನೆ ನಡೆಯಿತು.
ಈ ವೇಳೆ ಮಾತನಾಡಿದ ವಿಎಚ್ಪಿಯ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಕೇರಳದ ಐಸಿಸಿ ಮಾಡ್ಯೂಲ್ ಪ್ರಕರಣದಲ್ಲಿ ಈ ತಿಂಗಳ ಆರಂಭದಲ್ಲಿ ಉಳ್ಳಾಲದ ಅಮ್ಮರ್ ಅಬ್ದುಲ್ ರೆಹಮಾನ್ನನ್ನು ಎನ್ಐಎ ಬಂಧಿಸಿತ್ತು. ಇದು ದೇಶ ವಿರೋಧಿಗಳು ಕರಾವಳಿ ಪ್ರದೇಶವನ್ನು ತಮ್ಮ ನೆಲೆಯನ್ನಾಗಿ ಮಾಡಲು ನಡೆಸುತ್ತಿರುವ ಕುಕೃತ್ಯಕ್ಕೆ ಸಾಕ್ಷಿ ಎಂದು ತಿಳಿಸಿದ್ದಾರೆ. ಇಂತಹ ಉಗ್ರಗಾಮಿ ಚಟುವಟಿಕೆಗಳ ವಿರುದ್ಧ ಹಿಂದೂ ಸಮುದಾಯ ಎಚ್ಚೆತ್ತುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಹಾಗೆಯೇ ಉಳ್ಳಾಲದ ಎಲ್ಲಾ ವಾರ್ಡ್ಗಳಲ್ಲಿಯೂ ಪ್ಲೇಕಾರ್ಡ್ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಕರೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ. ಹಾಗೆಯೇ ಕೆಲ ದಿನಗಳ ಹಿಂದೆ ಎನ್ಐಎ ಕಾರ್ಯಾಚರಣೆ ಸಂದರ್ಭದಲ್ಲಿ ಹಿಂದೂ ಮಹಿಳೆಯೊಬ್ಬಳು ಮತಾಂತರವಾಗಿ ಬಳಿಕ ಐಸಿಸ್ ಸೇರಿದ್ದ ಬಗ್ಗೆಯೂ ವರದಿಯಾಗಿತ್ತು. ಹಾಗೆಯೇ ಮಾಜಿ ಶಾಸಕ ಇದಿನಬ್ಬ ಮನೆಯ ಮೇಲಿನ ಎನ್ಐಎ ದಾಳಿ, ಕುಟುಂಬ ಸದಸ್ಯರ ಬಂಧನ ಬಗ್ಗೆ ಮಾತನಾಡಿದ್ದಾರೆ.
ಇದು ಲವ್ ಜಿಹಾದ್ ಆಗಿದ್ದು, ಈ ದುಷ್ಕೃತ್ಯದ ವಿರುದ್ಧ ಹಿಂದೂ ಸಮಾಜ ಎಚ್ಚೆತ್ತುಕೊಳ್ಳುವಂತೆ ಸೂಚಿಸಿದ್ದಾರೆ. ಹಾಗೆಯೇ ಇಂತಹ ಕುಕೃತ್ಯಗಳಲ್ಲಿ ಭಾಗಿಯಾಗುವವರ ಮೇಲೆ ಕ್ರಮ ಕೈಗೊಳ್ಳುವಂತೆಯೂ ಅವರು ಅಧಿಕಾರಿಗಳಿಗೆ ಮನವಿ ಮಾಡಿದ್ದು, ಇಲ್ಲವಾದಲ್ಲಿ ವಿಎಚ್ಪಿ ಕಾನೂನು ಕ್ರಮಗಳನ್ನು ಕೈಗೆತ್ತಿಕೊಳ್ಳುವ ಪ್ರಮೇಯ ಬರಬಹುದು ಎಂದು ತಿಳಿಸಿದ್ದಾರೆ.
ಈ ಎಲ್ಲ ಮತಾಂಧ ಕೃತ್ಯ, ಭಯೋತ್ಪಾದನೆ ನಿಗ್ರಹಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಮಂಗಳೂರಿನಲ್ಲಿ ಎನ್ಐಎ ಕಚೇರಿ, ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಹಾಗೆಯೇ ಲವ್ ಜಿಹಾದ್ ಘಟನೆಗಳ ತನಿಖೆಗಾಗಿ ವಿಶೇಷ ಪೊಲೀಸ್ ತಂಡ ರಚನೆ ಮಾಡುವಂತೆಯೂ ಮನವಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಹಾಗೆಯೇ ಲವ್ ಜಿಹಾದ್, ಭಯೋತ್ಪಾದನೆ ಮೊದಲಾದವುಗಳ ವಿರುದ್ಧ ಹಿಂದೂ ಸಮಾಜಕ್ಕೆ ಅರಿವು ಮೂಡಿಸುವ ಕಾರ್ಯಗಳನ್ನು ಮಾಡುವಂತೆಯೂ ಅವರು ಸಮುದಾಯ ಸಂಘಟನೆಗಳಿಗೆ ಕರೆ ನೀಡಿದ್ದಾರೆ. ಜೊತೆಗೆ ಭಯೋತ್ಪಾದನೆಗೆ ಸಂಬಂಧಿಸಿದಂತೆ ಕರಾವಳಿಯಿಂದ ಎನ್ಐಎ ಬಂಧನಕ್ಕೆ ಒಳಗಾದ ಆರೋಪಿಗಳ ಸಮಗ್ರ ತನಿಖೆ ನಡೆಸುವಂತೆಯೂ ಅವರು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.