ಬೆಂಗಳೂರು: ರಾಜ್ಯದ ಸರ್ಕಾರಿ ರೈಲ್ವೆ ಪೊಲೀಸ್ ಇಲಾಖೆಯು ರೈಲು ನಿಲ್ದಾಣಗಳಲ್ಲಿ ಭದ್ರತೆ ಮತ್ತು ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಪಡೆ ರಚಿಸಿದೆ.
ಈ ಕಾರ್ಯಪಡೆಯಲ್ಲಿ 100 ಮಂದಿ ಪೇದೆಗಳು ಕಾರ್ಯ ನಿರ್ವಹಿಸಲಿದ್ದಾರೆ. ಈ ತಂಡ ಬೆಂಗಳೂರು, ಮೈಸೂರು, ಕಲ್ಬುರ್ಗಿ ವಿಭಾಗಗಳಲ್ಲಿ ಸಕ್ರಿಯವಾಗಿರಲಿದೆ. ಈ ಕಾರ್ಯಪಡೆಗೆ ಆಗಸ್ಟ್ 15 ಭಾನುವಾರದಿಂದ ಅಧಿಕೃತ ಚಾಲನೆ ದೊರೆಯಲಿದೆ.
ಇದರಲ್ಲಿ 70 ಮಂದಿ ಪುರುಷ ಸಿಬ್ಬಂದಿ, 30 ಮಂದಿ ಮಹಿಳಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಈ ಕಾರ್ಯಪಡೆಗೆ ಪ್ರತ್ಯೇಕ ಸಮವಸ್ತ್ರಗಳನ್ನು ಒದಗಿಸಲಾಗುತ್ತದೆ. ಅವರಿಗೆ ಆತ್ಮರಕ್ಷಣಾ ತರಬೇತಿಯನ್ನು ಸಹ ನೀಡಲಾಗುತ್ತದೆ ಎಂದು ಇಲಾಖೆ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.