ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಅಡಿಯಲ್ಲಿ ಭಾರತೀಯ ಮೌಲ್ಯಗಳಾದ ನಿಷ್ಕಾಮ ಕರ್ಮ, ಸೇವೆಗಳನ್ನೊಳಗೊಂಡಂತೆ ಇನ್ನೂ ಹಲವು ವಿಷಯಗಳ ಪಠ್ಯಗಳನ್ನು ಸೇರ್ಪಡೆ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಶಾಲಾ ಮಕ್ಕಳಲ್ಲಿ ಭಾರತೀಯ ಮೌಲ್ಯಗಳನ್ನು ಅಳವಡಿಸುವುದಕ್ಕೆ ಪೂರಕವಾಗಿ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಲೋಕಸಭೆಗೆ ತಿಳಿಸಿದ್ದು, ಇದರಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣಕ್ಕಾಗಿ ಪಠ್ಯಕ್ರಮ, ಪಠ್ಯ ಪುಸ್ತಕ ಸಾಮಗ್ರಿಗಳನ್ನು ಅಭಿವೃದ್ಧಿ ಮಾಡಲಾಗಿದೆ. ಮೌಲ್ಯ ಶಿಕ್ಷಣದ ಹಂತಗಳು, ಅವುಗಳ ಸಂಯೋಜನೆ, ಅವುಗಳ ಅಧ್ಯಯನಕ್ಕೆ ಪೂರಕವಾದ ಅವಶ್ಯಕತೆಗಳನ್ನು ಒದಗಿಸುವುದು ಮೊದಲಾದವುಗಳ ಬಗೆಗೂ ಸರ್ಕಾರ ಗಮನ ಹರಿಸಿದೆ ಎಂದು ಹೇಳಿದ್ದಾರೆ.
ಪ್ರಾಥಮಿಕ ಮತ್ತು ಮಾಧ್ಯಮಿಕ ಹಂತದಲ್ಲಿ ಸಮಾಜ ವಿಜ್ಞಾನ ಪಠ್ಯಕ್ಕೆ ಸಿದ್ಧಪಡಿಸಲಾದ ಮಾಡ್ಯೂಲ್ಗಳಲ್ಲಿ ನಿಷ್ಠಾ ಕಾರ್ಯಕ್ರಮದ ಬಗ್ಗೆ, ಭಾರತೀಯ ಮೌಲ್ಯಗಳ ಬಗ್ಗೆ ಪಠ್ಯಕ್ರಮಗಳನ್ನು ಅಳವಡಿಸಲು ಪ್ರಯತ್ನ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ. ಹಾಗೆಯೇ ನೈತಿಕ ತಾರ್ಕಿಕತೆ, ಸಾಂಪ್ರದಾಯಿಕ ಭಾರತೀಯ ಮೌಲ್ಯಗಳಾದ ಸೇವೆ, ಅಹಿಂಸೆ, ಸ್ವಚ್ಛತೆ, ಸತ್ಯ, ನಿಷ್ಕಾಮ ಕರ್ಮ, ಶಾಂತಿ, ತ್ಯಾಗ, ಸಹಿಷ್ಣುತೆ, ಬಹುತ್ವ, ನೀತಿಬದ್ಧ ನಡಾವಳಿಗಳು, ಲಿಂಗ ಸಂವೇದನೆ, ಹಿರಿಯರಿಗೆ ಗೌರವ ಮೊದಲಾದವುಗಳನ್ನು ವಿದ್ಯಾರ್ಥಿಗಳಿಗೆ ಕಲಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.