ಬೆಂಗಳೂರು: ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಜಾತಿಗಳನ್ನು ಸೇರಿಸುವ ರಾಜ್ಯಗಳ ಅಧಿಕಾರವನ್ನು ಮರುಸ್ಥಾಪಿಸುವ ಸಂವಿಧಾನದ ತಿದ್ದುಪಡಿ ವಿಧೇಯಕವನ್ನು ಕೇಂದ್ರ ಸರ್ಕಾರವು ಅಂಗೀಕರಿಸಿದ್ದು ಸ್ವಾಗತಾರ್ಹ. ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಕ್ರಮವಾಗಿದ್ದು, ಇದಕ್ಕಾಗಿ ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವ ಸಂಪುಟಕ್ಕೆ ಧನ್ಯವಾದ ಸಮರ್ಪಿಸುವುದಾಗಿ ಸಚಿವ ಬಿ. ಶ್ರೀರಾಮುಲು ತಿಳಿಸಿದರು.
ಕಾರ್ಯಕರ್ತರ ಭೇಟಿ, ಕಾರ್ಯಕರ್ತರ ಸಮಸ್ಯೆಗಳಿಗೆ ಪರಿಹಾರ ಕೊಡುವ ದೃಷ್ಟಿಯಿಂದ ಬಿಜೆಪಿ ರಾಜ್ಯ ಕಾರ್ಯಾಲಯಕ್ಕೆ ಇಂದು ಭೇಟಿ ನೀಡಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸೂಚನೆ ಮೇರೆಗೆ ನಿಗದಿತ ದಿನದಂದು ರಾಜ್ಯ ಕಾರ್ಯಾಲಯಕ್ಕೆ ಭೇಟಿ ಕೊಡಲಿದ್ದೇನೆ ಎಂದು ಅವರು ಹೇಳಿದರು.
ಮೀಸಲಾತಿ ಮುಂದುವರಿಕೆ ಅಗತ್ಯದ ಕುರಿತಂತೆ ಆರ್ಎಸ್ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಸ್ವಾಗತಾರ್ಹ. ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರಕಾರಗಳು ಮತ್ತು ಆರೆಸ್ಸೆಸ್ ಸಂಘಟನೆ ನಿರಂತರವಾಗಿ ದಲಿತರ ಪರವಾಗಿ ಕೆಲಸ ಮಾಡುತ್ತಿವೆ. ಆದರೆ, ಜನರಲ್ಲಿ ತಪ್ಪು ಕಲ್ಪನೆ ಮೂಡಿಸಲು ಕಾಂಗ್ರೆಸ್ ಮುಖಂಡರು ಬಿಜೆಪಿ ಹಾಗೂ ಆರೆಸ್ಸೆಸ್ ಬಗ್ಗೆ ಅಪಪ್ರಚಾರ ಮಾಡುತ್ತಿದ್ದವು. ಈಗ ಈ ಸತ್ಯ ಜನರಿಗೂ ಅರಿವಾಗಿದೆ ಎಂದು ತಿಳಿಸಿದರು.
ಈಗ ದಲಿತರು, ಶೋಷಿತರು ಮತ್ತು ಹಿಂದುಳಿದ ವರ್ಗದವರು ಕಾಂಗ್ರೆಸ್ನ ಪೊಳ್ಳು ಭರವಸೆಯನ್ನು ಅರ್ಥೈಸಿಕೊಂಡಿದ್ದಾರೆ. ಇನ್ನೊಂದೆಡೆ ಪ್ರಧಾನಿ ಮೋದಿ ಅವರ ಕಾರ್ಯವೈಖರಿ, ದಲಿತರ ಪರ ಕಾರ್ಯಗಳನ್ನು ಗಮನಿಸಿ ಬಿಜೆಪಿಗೆ ಪೂರ್ಣ ಪ್ರಮಾಣದಿಂದ ಬೆಂಬಲ ನೀಡುತ್ತಿದ್ದಾರೆ. ಇದರಿಂದ ಎಲ್ಲ ಕಡೆಗಳಲ್ಲಿ ಬಿಜೆಪಿ ಗೆಲ್ಲುತ್ತಿದೆ ಹಾಗೂ ಕಾಂಗ್ರೆಸ್ ಪಕ್ಷ ಸೋಲುತ್ತಿದೆ ಎಂದು ತಿಳಿಸಿದರು.
ಕೇಂದ್ರದ ಸಚಿವ ಸಂಪುಟ, ರಾಜ್ಯಪಾಲರ ನೇಮಕಾತಿ ವಿಚಾರದಲ್ಲೂ ಕೇಂದ್ರ ಸರಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದವರಿಗೆ ಗರಿಷ್ಠ ಆದ್ಯತೆ ನೀಡಿದೆ. ಇದು ಕೇಂದ್ರದ ಪ್ರಧಾನಿ ಮೋದಿ ಅವರ ಬಿಜೆಪಿ ಸರ್ಕಾರದ ದಲಿತ- ಹಿಂದುಳಿದವರ ಪರವಾದ ಕಾರ್ಯವೈಖರಿಯನ್ನು ಪ್ರತಿಬಿಂಬಿಸುವಂತಿದೆ ಎಂದು ಅವರು ಮೆಚ್ಚುಗೆ ಸೂಚಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.