ನವದೆಹಲಿ: ಆಗಸ್ಟ್ 12 ರಂದು ನಡೆಯಲಿರುವ ‘ಆತ್ಮನಿರ್ಭರ್ ಸೆ ನಾರೀ ಶಕ್ತಿ’ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿರುವ ಈ ಕಾರ್ಯಕ್ರಮದಲ್ಲಿ, ದೀನ್ದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಬರುವ ಮಹಿಳಾ ಸ್ವಸಹಾಯ ಸಂಘಗಳ ಜೊತೆಗೆ ಪ್ರಧಾನಿ ಸಂವಾದ ನಡೆಸಲಿದ್ದಾರೆ.
ಹಾಗೆಯೇ ಇದೇ ಸಂದರ್ಭದಲ್ಲಿ ದೇಶದ ಸ್ವಸಹಾಯ ಗುಂಪುಗಳ ಮಹಿಳೆಯರ ಯಶೋಗಾಥೆಗಳ ಸಂಗ್ರಹವನ್ನು ಪ್ರಧಾನಿ ಲೋಕಾರ್ಪಣೆ ಮಾಡಲಿದ್ದಾರೆ. ಜೊತೆಗೆ 4 ಲಕ್ಷ ಸ್ವಸಹಾಯ ಸಂಘಗಳಿಗೆ 1625 ಕೋಟಿ ರೂ. ಗಳ ಬಂಡವಾಳ ಬೆಂಬಲ ನಿಧಿ ಬಿಡುಗಡೆ ಮಾಡಲಿದ್ದಾರೆ ಎಂದು ಪ್ರಧಾನಿ ಕಚೇರಿಯ ಪ್ರಕಟಣೆ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.