ನವದೆಹಲಿ: ಕೋಲಾರ ಜಿಲ್ಲೆಯ ಕೆಜಿಎಫ್ನ ಭಾರತ್ ಗೋಲ್ಡ್ ಮೈನ್ಸ್ ಲಿ. ವ್ಯಾಪ್ತಿಯ ಖಾಲಿ ಜಮೀನಿನಲ್ಲಿ ಇಂಡಸ್ಟ್ರಿಯಲ್ ಟೌನ್ಶಿಪ್ ಪ್ರಾರಂಭಿಸಲು ಅನುಮತಿ ಕೋರಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿದ ಅವರು, ಕೆಜಿಎಫ್ನಲ್ಲಿ ಕೈಗಾರಿಕಾ ಟೌನ್ಶಿಪ್ ಅಗತ್ಯತೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಕೆಜಿಎಫ್ನ 3212 ಎಕರೆ ಪ್ರದೇಶಗಳಲ್ಲಿ ಕೇಂದ್ರ ಸರ್ಕಾರ ಡ್ರೋಣ್ ಮೂಲಕ ಸಮೀಕ್ಷೆ ನಡೆಸಿದ್ದು, ಈ ಸಂದರ್ಭದಲ್ಲಿ ಇಲ್ಲಿ ಗಣಿಗಾರಿಕೆ ಸೂಕ್ತವಲ್ಲ ಎಂದು ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಬಳಕೆಯಾಗದೆ ಉಳಿದಿರುವ ಖಾಲಿ ಪ್ರದೇಶದಲ್ಲಿ ಕೈಗಾರಿಕಾ ಟೌನ್ಶಿಪ್ ನಿರ್ಮಾಣಕ್ಕೆ ಅನುಕೂಲ ಒದಗಿಸುವಂತೆ ಅವರು ಮನವಿ ಮಾಡಿದರು.
ಇಲ್ಲಿ ಟೌನ್ಶಿಪ್ ನಿರ್ಮಾಣವಾಗುವುದರಿಂದ ಕೈಗಾರಿಕೆಗಳಿಗೆ ಉತ್ತೇಜನ ದೊರೆಯುವ ಜೊತೆಗೆ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಸುತ್ತಮುತ್ತಲ ಜನರಿಗೆ ಉದ್ಯೋಗಾವಕಾಶ ಹೆಚ್ಚುತ್ತದೆ. ಈ ನಿಟ್ಟಿನಲ್ಲಿ ಟೌನ್ಶಿಪ್ನಿರ್ಮಾಣಕ್ಕೆ ಅವಕಾಶ ನೀಡುವಂತೆ ಅವರು ಕೇಂದ್ರ ಸಚಿವರಿಗೆ ಮನವಿ ಮಾಡಿದರು.
ಇವರ ಮನವಿಗೆ ಪ್ರಲ್ಹಾದ್ ಜೋಶಿ ಅವರು ಸಕಾರಾತ್ಮಕ ಸ್ಪಂದನೆ ನೀಡಿದ್ದು, ಶೀಘ್ರದಲ್ಲೇ ಸ್ಥಳಕ್ಕೆ ಅಧಿಕಾರಿಗಳನ್ನು ಕಳುಹಿಸಿ ವಸ್ತುಸ್ಥಿತಿ ಅಧ್ಯಯನ ನಡೆಸಲಾಗುವುದು ಎಂದು ತಿಳಿಸಿದರು. ಇದಕ್ಕೆ ಕೇಂದ್ರ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುವ ಭರವಸೆಯನ್ನು ಸಹ ಜೋಶಿ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.