ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗಗಳಿಗೆ ತಾರತಮ್ಯವಿಲ್ಲದೆ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕು. ಹಾಗೆಯೇ ಸೋರಿಕೆ ತಡೆಗಟ್ಟಿ, ಸ್ವಾವಲಂಬನೆ ಜೊತೆಗೆ ಸಮರ್ಪಕ ನಿರ್ವಹಣೆಗೂ ಹೆಚ್ಚಿನ ಕಾಳಜಿ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹಾಗೆಯೇ ಪ್ರಸ್ತುತ ಕೊರೋನಾ ಸಂದರ್ಭದಲ್ಲಿ ಆಸ್ಪತ್ರೆಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಹೇಳಿದ್ದಾರೆ. ಮಾರುಕಟ್ಟೆ ಸ್ಥಿತಿಗತಿಗಳನ್ನು ಅವಲೋಕಿಸಿ ಹೆಚ್ಚಿನ ದರಕ್ಕೆ ವಿದ್ಯುತ್ ಮಾರಾಟ ಮಾಡುವಂತೆ ಹೆಚ್ಚು ದಕ್ಷತೆಯಿಂದ ಕಾರ್ಯ ನಿರ್ವಹಿಸಲು ಕರ್ನಾಟಕ ವಿದ್ಯುತ್ ನಿಗಮದಿಂದ ಅವರು ಸೂಚನೆ ನೀಡಿದ್ದಾರೆ. ಜಲ ಮತ್ತು ವಿದ್ಯುತ್ ಘಟಕಗಳ ಕಾರ್ಯ ಕ್ಷಮತೆ ಹೆಚ್ಚಿಸುವಂತೆಯೂ ಅವರು ಸೂಚಿಸಿದ್ದಾರೆ.
ರಾಜ್ಯದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಲಾಗಿರುವ ಬೋರ್ವೆಲ್ಗಳಿಗೆ ಯಾವುದೇ ರೀತಿಯ ಅಡೆತಡೆಯಾಗದಂತೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.