ಹಾಸನ: ಜಿಲ್ಲೆಯ ವಿಶ್ವವಿಖ್ಯಾತ ಜೈನ ತೀರ್ಥಕ್ಷೇತ್ರ ಶ್ರವಣಬೆಳಗೊಳದ ಸಮೀಪದಲ್ಲಿರುವ ನಾಗಯ್ಯನ ಕೊಪ್ಪಲು ಪ್ರದೇಶದಲ್ಲಿ 10 ನೇ ಶತಮಾನಕ್ಕೆ ಸೇರಿದ ಶಾಸನವೊಂದು ಪತ್ತೆಯಾಗಿದೆ.
ಈ ಶಾಸನ ದೊರೆತ ಸ್ಥಳಕ್ಕೆ ಪುರಾತತ್ವ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಈ ಶಾಸನಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕಿದ್ದಾರೆ. ಐತಿಹಾಸಿಕ ಸ್ಮಾರಕಗಳು, ಶಿಲ್ಪಗಳನ್ನು ಸಂರಕ್ಷಣೆ ಮಾಡುವ ವಸ್ತುಸಂಗ್ರಹಾಲಯಕ್ಕೆ ಈ ಶಾಸನವನ್ನು ಸ್ಥಳಾಂತರ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೃಷಿ ಚಟುವಟಿಕೆ ನಡೆಸುವ ಸಂದರ್ಭದಲ್ಲಿ ಈ ಶಾಸನ ಪತ್ತೆಯಾಗಿದ್ದು, ಇದರಲ್ಲಿ ಕನ್ನಡ ಸಾಹಿತ್ಯಗಳಿವೆ. ಈ ಶಾಸನದಲ್ಲಿ ಮೌರ್ಯ ವಂಶದ ಜೈನ ಧರ್ಮ ಮತ್ತು ದೊರೆ ಚಂದ್ರಗುಪ್ತನ ಬಗ್ಗೆ ಮಾಹಿತಿ ಇದೆ ಎಂದು ಎಸ್ಎನ್ ಪಿಯು ಕಾಲೇಜಿನ ಸಂಶೋಧಕ ಮತ್ತು ಉಪನ್ಯಾಸಕ ಡಾ. ಎಸ್. ದಿನೇಶ್ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.