ನವದೆಹಲಿ: ಜೂನ್ ತಿಂಗಳಲ್ಲಿ ದೇಶದ ಕೈಗಾರಿಕಾ ವಲಯದಲ್ಲಿ ಉತ್ಪಾದನೆ 13.6% ಗಳಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಈ ಸಂಬಂಧ ರಾಷ್ಟ್ರೀಯ ಸಾಂಖ್ಯಿಕ ಕಚೇರಿ (NSO) ಕೈಗಾರಿಕಾ ಉತ್ಪಾದನಾ ಸೂಚ್ಯಂಕ ದತ್ತಾಂಶ ಬಿಡುಗಡೆ ಮಾಡಿದ್ದು, ಇದರಲ್ಲಿ ಉತ್ಪಾದನೆ 13% ಗಳಷ್ಟು ಏರಿಕೆಯಾಗಿರುವಾಗಿ ತಿಳಿಸಿದೆ. ಗಣಿಗಾರಿಕೆ ಉತ್ಪಾದನೆಯು 23.1% ಗಳಷ್ಟು ಏರಿಕೆ ಕಂಡಿದೆ. ಜೂನ್ ತಿಂಗಳಲ್ಲಿ ವಿದ್ಯುತ್ ಉತ್ಪಾದನೆ 8.3% ಗಳಷ್ಟು ಏರಿಕೆಯಾಗಿದೆ ಎಂದು ಈ ವರದಿ ತಿಳಿಸಿದೆ.
ಈ ವರ್ಷದ ಎಪ್ರಿಲ್ – ಜೂನ್ ಅವಧಿಯಲ್ಲಿ ಐಐಪಿಯು 45% ಗಳಷ್ಟು ಏರಿಕೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಐಐಪಿಯು 35.6% ಗಳಷ್ಟಾಗಿತ್ತು ಎಂದು ಎನ್ಎಸ್ಒ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.