ಬೆಂಗಳೂರು: ರಾಜ್ಯದಲ್ಲಿ ಸಂಪೂರ್ಣ ಗೋಹತ್ಯೆ ನಿಷೇಧ, ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಲು ಕ್ರಮ ಕೈಗೊಳ್ಳುವುದಾಗಿ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಅಕ್ರಮ ಕಸಾಯಿಖಾನೆಗಳು ಕಾರ್ಯಾಚರಣೆ ನಡೆಸುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಈ ಸಂಬಂಧ ಗೃಹ ಇಲಾಖೆ ಸಹಯೋಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಬಕ್ರೀದ್ ಸಂದರ್ಭದಲ್ಲಿ ರಾಜ್ಯದಲ್ಲಿ ಸುಮಾರು ಆರು ಸಾವಿರಕ್ಕೂ ಅಧಿಕ ಗೋವುಗಳ ಸಂರಕ್ಷಣೆ ಮಾಡಲಾಗಿದೆ. ಈ ಕೆಲಸಕ್ಕೆ ಪ್ರಾಣಿ ಕಲ್ಯಾಣ ಸಂಘಗಳು, ಗೃಹ ಇಲಾಖೆ ಸಿಬ್ಬಂದಿ, ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಅಭಿನಂದನೆ ತಿಳಿಸುವುದಾಗಿ ಅವರು ಹೇಳಿದ್ದಾರೆ. ಹಾಗೆಯೇ ಪಶು ಸಂಗೋಪನಾ ಇಲಾಖೆಯ ಅಭಿವೃದ್ಧಿ ಕೆಲಸಗಳಿಗೆ ಹಿನ್ನಡೆಯಾಗದಂತೆ ಎಚ್ಚರಿಕೆ ವಹಿಸುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹಾಗೆಯೇ ಜಿಲ್ಲೆಗೊಂದು ಗೋಶಾಲೆ ತೆರೆಯುವ ಕಾರ್ಯಕ್ಕೆ ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು ಚಾಲನೆ ನೀಡಲು ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಅದರ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಪಶು ಸಂಜೀವಿನಿ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ರಾಜ್ಯದ ಮತ್ತಷ್ಟು ಜಿಲ್ಲೆಗಳಿಗೆ ಚಿಕಿತ್ಸಾ ವಾಹನ ಒದಗಿಸುವ ಕೆಲಸವನ್ನು ಸಹ ಇಲಾಖೆ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.