ನವದೆಹಲಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ವಧಿಸಲಾಗಿದೆ.
ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇಂದು ನಸುಕಿನ ವೇಳೆಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಈ ಕಾರ್ಯಾಚರಣೆಯಲ್ಲಿ ಉಗ್ರನ ಸಂಹಾರವಾಗಿದೆ. ಓರ್ವ ಯೋಧ ಮತ್ತು ಇಬ್ಬರು ನಾಗರಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಉಗ್ರರು ಅಡಗಿಕೊಂಡಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಈ ಕಾರ್ಯಾಚರಣೆಯನ್ನು ನಡೆಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.