ಬೆಂಗಳೂರು: ಮುಖ್ಯಮಂತ್ರಿಯಾಗಿ ನಾನು ಯಾವುದೇ ಪ್ರದೇಶಕ್ಕೆ ಆಗಮಿಸುವ ಸಂದರ್ಭದಲ್ಲಿ ಶುಭಾಶಯ ಕೋರಿ ಬ್ಯಾನರ್, ಹೋರ್ಡಿಂಗ್ಗಳನ್ನು ಹಾಕಬಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಸ್ತೆ ಬದಿಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮುಖ್ಯಮಂತ್ರಿಗಳಿಗೆ ಶುಭಾಶಯ ಕೋರಿ ಹೋರ್ಡಿಂಗ್ಗಳನ್ನು ಹಾಕಬಾರದಾಗಿ ವಿನಂತಿ ಮಾಡುತ್ತೇನೆ ಎಂದು ಬೊಮ್ಮಾಯಿ ಅವರು ಪಕ್ಷದ ನಾಯಕರು, ಕಾರ್ಯಕರ್ತರು, ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿಯಾದರೂ ನಾನು ಜನ ಸೇವಕನಾಗಿದ್ದೇನೆ. ಜನ ಸೇವಕ ಎಂಬ ಭಾವನೆಗೆ ಧಕ್ಕೆಯಾಗಬಾರದು ಎಂಬ ಉದ್ದೇಶದಿಂದ ಬ್ಯಾನರ್, ಪೋಸ್ಟರ್, ಹೋರ್ಡಿಂಗ್ಗಳನ್ನು ಅಳವಡಿಸದಂತೆ ಮನವಿ ಮಾಡುವುದಾಗಿ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.