ನವದೆಹಲಿ : ಭಾರತದಲ್ಲಿ ಶರವೇಗದಲ್ಲಿ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಇದುವರೆಗೆ ಸುಮಾರು 53 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಅಂದರೆ, 52,95,82,956 ಡೋಸ್ ಲಸಿಕೆ ಹಾಕಲಾಗಿದೆ. ಇಂದು ಬೆಳಿಗ್ಗೆ 7 ಗಂಟೆಗೆ ಬಿಡುಗಡೆಯಾಗಿರುವ ತಾತ್ಕಾಲಿಕ ವರದಿಯ ಪ್ರಕಾರ, 60,40,607 ಆಂದೋಲನಗಳಲ್ಲಿ ಈ ಸಾಧನೆ ಮಾಡಲಾಗಿದೆ. ದೇಶಾದ್ಯಂತ ಕಳೆದ 24 ತಾಸುಗಳಲ್ಲೇ 57,31,574 ಡೋಸ್ ಲಸಿಕೆ ಹಾಕಲಾಗಿದೆ.
ಅವುಗಳಲ್ಲಿ ಆರೋಗ್ಯ ಸಂರಕ್ಷಣಾ ಕಾರ್ಯಕರ್ತರಿಗೆ ಮೊದಲ ಡೋಸ್ – 1,03,43,406, 2ನೇ ಡೋಸ್ – 80,50,401 ; ಮುಂಚೂಣಿ ಕಾರ್ಯಕರ್ತರಿಗೆ ಮೊದಲ ಡೋಸ್ – 1,82,54,407, 2ನೇ ಡೋಸ್ – 1,19,88,029 ; 18-44 ವಯೋಮಾನದವರಿಗೆ ಮೊದಲ ಡೋಸ್ – 18,80,51,247, 2ನೇ ಡೋಸ್- 1,39,53,516 ; 45-59 ವಯೋಮಾನದವರಿಗೆ ಮೊದಲ ಡೋಸ್ – 11,48,89,656, 2ನೇ ಡೋಸ್ – 4,44,21,296 ; 60 ವರ್ಷ ದಾಟಿದವರಿಗೆ ಮೊದಲ ಡೋಸ್ – 8,00,90,640, 2ನೇ ಡೋಸ್ – 3,95,40,358 ರಂತೆ ಒಟ್ಟು 52,95,82,956 ಡೋಸ್ ನೀಡಲಾಗಿದೆ.
ಕೋವಿಡ್-19 ಲಸಿಕೆ ಅಭಿಯಾನ ಸಾರ್ವತ್ರೀಕರಣದ ಹೊಸ ಹಂತ 2021 ಜೂನ್ 21ರಿಂದ ಆರಂಭವಾಗಿದೆ. ಕೇಂದ್ರ ಸರ್ಕಾರ ದೇಶಾದ್ಯಂತ ಅಭಿಯಾನದ ವ್ಯಾಪ್ತಿ ಹೆಚ್ಚಿಸಲು ಮತ್ತು ಈ ಕಾರ್ಯಕ್ರಮದ ಗತಿಗೆ ವೇಗ ನೀಡಲು ಬದ್ಧವಾಗಿದೆ.
ಭಾರತದ ಚೇತರಿಕೆ ದರ ಇದೀಗ 97.46%ಗೆ ಸುಧಾರಣೆ ಕಂಡಿದೆ. ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ ಚೇತರಿಕೆ ದರದಲ್ಲಿ ಅತ್ಯಂತ ಗರಿಷ್ಠ ಸುಧಾರಣೆ ಕಂಡುಬಂದಿದೆ.
ಸೋಂಕು ಕಾಣಿಸಿಕೊಂಡ ಆರಂಭದಿಂದ ಇದುವರೆಗೆ 3,13,02,345 ಜನರು ಈಗಾಗಲೇ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶಾದ್ಯಂತ ಕಳೆದ 24 ತಾಸುಗಳಲ್ಲಿ 42,295 ಮಂದಿ ಚೇತರಿಸಿಕೊಂಡಿದ್ದಾರೆ. ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 40,120 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಸತತ 47 ದಿನಗಳಿಂದ ದಿನನಿತ್ಯ ಪತ್ತೆಯಾಗುತ್ತಿರುವ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ 50,000 ಮಟ್ಟದಿಂದ ಕೆಳಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಕೇಂದ್ರ ಸರ್ಕಾರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಸರ್ಕಾರಗಳ ಸುಸ್ಥಿರ ಮತ್ತು ಜಂಟಿ ಸಹಭಾಗಿತ್ವದ ಪ್ರಯತ್ನಗಳ ಫಲವಾಗಿ, ಹೊಸ ಕೊರೊನಾ ಪ್ರಕರಣಗಳು ದಿನೇದಿನೆ ಇಳಿಕೆಯಾಗುತ್ತಿವೆ.
ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ ಇದೀಗ 3,85,227ಕ್ಕೆ ಇಳಿಕೆ ಕಂಡಿದೆ. ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.20% ಇದೆ. 2020 ಮಾರ್ಚ್ ನಿಂದ ಕಂಡುಬಂದಿರುವ ಅತ್ಯಂತ ಕನಿಷ್ಠ ಪ್ರಮಾಣ ಇದಾಗಿದೆ.
ದೇಶಾದ್ಯಂತ ಗಂಟಲು ಮತ್ತು ಮೂಗಿನ ದ್ರವ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಕಳೆದ 24 ತಾಸಸುಗಳಲ್ಲೇ 19,70,495 ಪರೀಕ್ಷೆಗಳನ್ನು ನಡೆಸಲಾಗಿದೆ. ಇದುವರೆಗೆ ದೇಶಾದ್ಯಂತ ಒಟ್ಟಾರೆ 48.94 ಕೋಟಿ ಅಂದರೆ 48,94,70,779 ಪರೀಕ್ಷೆಗಳನ್ನು ನಡೆಸಲಾಗಿದೆ.
ಒಂದೆಡೆ ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿರುವ ಪರಿಣಾಮ, ವಾರದ ಪಾಸಿಟಿವಿಟಿ ದರ ಇದೀಗ 2.13% ಮತ್ತು ದೈನಂದಿನ ಪಾಸಿಟಿವಿಟಿ ದರ 2.04%ಗೆ ಇಳಿಕೆಯಾಗಿದೆ. ಸತತ 18 ದಿನಗಳಿಂದ ದೈನಂದಿನ ಪಾಸಿಟಿವಿಟಿ ದರ 3% ಮಟ್ಟದಿಂದ ಕೆಳಗಿದೆ ಹಾಗೂ ನಿರಂತರ 67 ದಿನಗಳಿಂದ 5% ಮಟ್ಟದಿಂದ ಕೆಳಗೆ ಕಾಯ್ದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.