ಬೆಂಗಳೂರು: ರಾಜ್ಯದ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
ಖಾಸಗಿ ವಿದ್ಯಾರ್ಥಿಗಳಿಗೆ ಮತ್ತು ಜುಲೈನಲ್ಲಿ ನೀಡಲಾದ ಗ್ರೇಡ್ನಿಂದ ಅಸಮಾಧಾನ ಹೊಂದಿರುವ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಈ ಪರೀಕ್ಷೆ ನಡೆಸುತ್ತಿದೆ. ಈ ಬಾರಿ ಒಟ್ಟು ಏಳು ಬಾರಿ ಪರಿಶೀಲನೆ ನಡೆಸುವ ಮೂಲಕ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲಾಗಿತ್ತು. ಈ ಹಿಂದಿನ ಗ್ರೇಡ್ ಪದ್ಧತಿಯನ್ನು ಈ ಬಾರಿ ಕೈಬಿಡಲಾಗಿತ್ತು. ಈ ಫಲಿತಾಂಶ ಹಲವು ವಿದ್ಯಾರ್ಥಿಗಳಿಗೆ ಸಮಾಧಾನಕರವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಅಂತಹ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ನಡೆಸಲು ಈ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಈ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಆಡಳಿತಾಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ಸಹ ಇಲಾಖೆ ನೀಡಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಈ ಪರೀಕ್ಷೆ ನಡೆಸಲಾಗುತ್ತದೆ ಎಂದು ಇಲಾಖೆ ಹೇಳಿದೆ. ಆಗಸ್ಟ್ 19 – ಸೆಪ್ಟೆಂಬರ್ 3 ರ ವರೆಗೆ ಪರೀಕ್ಷಾ ದಿನಾಂಕಗಳನ್ನು ನಿಗದಿ ಮಾಡಲಾಗಿದೆ. 187 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯದ 5546 ಕಾಲೇಜುಗಳ 18,414 ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲಿದ್ದಾರೆ ಎಂದು ಮೂಲಗಳು ಹೇಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.