ಬೆಂಗಳೂರು: ಈ ಬಾರಿ ವಿದ್ಯಾರ್ಥಿಗಳ ಹಾಜರಾತಿ ಇಲ್ಲದೆಯೇ ಎಲ್ಲಾ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ.
ಎಲ್ಲಾ ರೀತಿಯ ಕೊರೋನಾ ನಿಯಮಾವಳಿಗಳನ್ನು ಅನುಸರಿಸುವ ಮೂಲಕ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಸ್ವಾತಂತ್ರ್ಯ ದಿನ ಆಚರಿಸುವಂತೆ ಸರ್ಕಾರ ಹೇಳಿದೆ. ಹಾಗೆಯೇ ಈ ವಿಡಿಯೋಗಳನ್ನು ವಿದ್ಯಾರ್ಥಿಗಳಿಗೆ ಶೇರ್ ಮಾಡಬೇಕು. ದೈಹಿಕವಾಗಿ ತರಗತಿಗಳಿಗೆ ಹಾಜರಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿಲ್ಲ. ಆದರೆ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಮುಖ್ಯಸ್ಥರು, ನಾಗರಿಕರ ಜೊತೆಗೆ ಇದನ್ನು ಆಚರಣೆ ಮಾಡಬಹುದಾಗಿದೆ.
ಆನ್ಲೈನ್ ಮೂಲಕ ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ರಾಷ್ಟ್ರೀಯತೆಗೆ ಸಂಬಂಧಿಸಿದಂತೆ ವಿವಿಧ ಸ್ಪರ್ಧೆಗಳನ್ನು ನಡೆಸಬಹುದಾಗಿದೆ. ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ಹೋರಾಟಗಾರ ಬಗ್ಗೆ, ಅದರ ಮಹತ್ವದ ಬಗ್ಗೆ ಅರಿವು ಮೂಡಿಸುವಂತೆಯೂ ಇಲಾಖೆ ತಿಳಿಸಿದೆ. ಇನ್ನು ದೊಡ್ಡ ಮಟ್ಟದ ಸಭೆಗಳನ್ನು ನಡೆಸದಂತೆ ಇಲಾಖೆ ಆದೇಶಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.