ಬೆಂಗಳೂರು: ಈ ವರ್ಷವೂ ಸ್ವಾತಂತ್ರ್ಯ ದಿನಾಚರಣೆಯ ಮೇಲೆ ಕೊರೋನಾ ಕರಿನೆರಳು ಬಿದ್ದಿದ್ದು, ಸರಳವಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದೇ ಸಂದರ್ಭದಲ್ಲಿ ಕೊರೋನಾ ಸಂದರ್ಭದಲ್ಲಿ ಪ್ರಾಣ ಪಣಕ್ಕಿಟ್ಟು ದುಡಿದ ಕೊರೋನಾ ವಾರಿಯರ್ಸ್ಗಳಿಗೆ ಸನ್ಮಾನ ಮಾಡುವುದಾಗಿಯೂ ಸರ್ಕಾರ ತಿಳಿಸಿದೆ.
ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ಸ್ವಾತಂತ್ರೋತ್ಸವಕ್ಕೆ ಸಾರ್ವಜನಿಕರಿಗೆ ಪ್ರವೇಶ ನೀಡದಿರಲು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸದಿರಲು ಸರ್ಕಾರ ತೀರ್ಮಾನಿಸಿದೆ. ಆಗಸ್ಟ್ 15 ರ ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.
ಕಳೆದ ವರ್ಷವೂ ಕೊರೋನಾ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಈ ಬಾರಿಯೂ ಸಾರ್ವಜನಿಕರಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿಲ್ಲ. ಕೇವಲ ಆಹ್ವಾನಿತ ಗಣ್ಯರ ಸಮ್ಮುಖದಲ್ಲಿ ಸ್ವಾತಂತ್ರ್ಯ ದಿನದ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.