ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಹಲವು ಮಹತ್ವದ ಕ್ರಮಗಳನ್ನು ಜಾರಿಗೊಳಿಸಿ ಮೆಚ್ಚುಗೆಗೆ ಪಾತ್ರರಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಇದೀಗ ಮತ್ತೊಂದು ಮಹತ್ವದ ನಿರ್ಣಯ ಕೈಗೊಂಡಿದ್ದಾರೆ.
ತಮ್ಮ ಭೇಟಿಗೆ ಬರುವ ಸಂದರ್ಶಕರು, ಸಾರ್ವಜನಿಕರು ಅಥವಾ ಇನ್ಯಾರೇ ಆದರೂ, ತಮ್ಮ ನಿವಾಸದೊಳಕ್ಕೆ ಮೊಬೈಲ್ ಫೋನ್ ಕೊಂಡೊಯ್ಯುವಂತಿಲ್ಲ ಎಂದು ಅವರು ತಿಳಿಸಿದ್ದಾರೆ. ಈ ಸಂಬಂಧ ತಮ್ಮ ಆರ್. ಟಿ. ನಗರದ ನಿವಾಸದ ಪ್ರವೇಶದಲ್ಲಿ ಬೋರ್ಡ್ ಒಂದನ್ನು ಸಹ ಅಳವಡಿಸಿದ್ದಾರೆ.
ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಬರುವವರು ಅವರ ಮೊಬೈಲ್ ಫೋನ್ಗಳನ್ನು ಸಿಬ್ಬಂದಿಗಳ ಬಳಿ ನೀಡಿ, ಬಳಿಕ ಮುಖ್ಯಮಂತ್ರಿಗಳನ್ನು ಭೇಟಿ ಮಾಡಬೇಕು. ಭೇಟಿ ಮಾಡಿ ಹಿಂದಿರುಗುವ ಸಂದರ್ಭದಲ್ಲಿ ಮೊಬೈಲ್ ಫೋನ್ಗಳನ್ನು ಮತ್ತೆ ಪಡೆದುಕೊಂಡು ತೆರಳುವಂತೆ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.