ನವದೆಹಲಿ: ಭಾರತಕ್ಕೆ ಬರಲು ಬಯಸುವ ಅಫ್ಘನಿಸ್ಥಾನದಲ್ಲಿರುವವರ ವೀಸಾಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಅನುಕೂಲವಾಗುವಂತೆ ಹೊಸ ಮಾದರಿಯ ವಿಸಾವನ್ನು ಕೇಂದ್ರ ಗೃಹ ಸಚಿವಾಲಯವು ರೂಪಿಸಿದೆ.
ತಾಲೀಬಾನ್ ಅಫ್ಘನಿಸ್ಥಾನವನ್ನು ವಶಕ್ಕೆ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ, ಅಲ್ಲಿ ಸಿರುಕಿರುವ ಸಂತ್ರಸ್ತರಿಗೆ ನೆರವಾಗುವ ನಿಟ್ಟಿನಲ್ಲಿ ಭಾರತ ಸರ್ಕಾರ ಈ ಮಹತ್ವದ ನಿರ್ಣಯ ಮಾಡಿದೆ.
ಈ ಸಂಬಂಧ ಅಲ್ಲಿನ ತೀಕ್ಷ್ಣ ಪರಿಸ್ಥಿತಿಗಳನ್ನು ಪರಿಶೀಲಿಸಿ ವಿದೇಶಾಂಗ ಸಚಿವಾಲಯ ವಿಸಾ ನಿಬಂಧನೆಗಳನ್ನು ಪರಿಶೀಲನೆಗೆ ಒಳಪಡಿಸುತ್ತಿದೆ. ಇದಕ್ಕಾಗಿ ಇ ಎಮರ್ಜೆನ್ಸಿ ಎಕ್ಸ್ ಮಿಸ್ಕ್ ವಿಸಾ ಎಂಬ ಹೊಸ ಮಾದರಿಯ ಎಲೆಕ್ಟ್ರಾನಿಕ್ ವಿಸಾಗಳನ್ನು ಪರಿಚಯಿಸಲು ಕೇಂದ್ರ ಗೃಹ ಸಚಿವಾಲಯ ಕ್ರಮ ಕೈಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.