ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗುವಂತೆ ರೂಪಿಸಲಾಗಿರುವ ಡಾ. ರಾಜ್ ಕುಮಾರ್ ಲರ್ನಿಂಗ್ ಆ್ಯಪ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಈ ಆ್ಯಪ್ ಸಿದ್ಧಪಡಿಸಲಾಗಿದೆ. ಮಕ್ಕಳಿಗೆ ತರ್ಕಬದ್ಧವಾಗಿ ಚಿಂತಿಸುವುದಕ್ಕೆ ಪೂರಕ ಸಹಾಯವನ್ನು ಈ ಆಪ್ ಮಾಡುತ್ತದೆ. 21 ನೇ ಶತಮಾನದ ಜ್ಞಾನವಂತರಿಗೆ ತಮ್ಮ ಅರಿವಿನ ಮಟ್ಟವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಈ ಆ್ಯಪ್ ಸಹಕಾರಿಯಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಆ್ಯಪ್ಗಳ ಮೂಲಕ ನಾವು ಜಗತ್ತನ್ನೇ ತಲುಪುವುದು ಸಾಧ್ಯವಿದೆ. ರಾಜ್ಯದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಸಹ ಅನುಷ್ಠಾನಕ್ಕೆ ಬಂದಿದ್ದು, ಈ ಆ್ಯಪ್ ಸಹ ವಿದ್ಯಾರ್ಥಿಗಳಿಗೆ ತಮ್ಮ ಕೌಶಲಗಳನ್ನು ಹೆಚ್ಚಿಸಿಕೊಳ್ಳುವುದಕ್ಕೆ ಸಹಾಯ ಮಾಡಲಿದೆ ಎಂದು ಅವರು ಹೇಳಿದರು.
ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ರೂಪಿಸಲಾಗಿರುವ ಡಾ. ರಾಜ್ ಕುಮಾರ್ ಶೈಕ್ಷಣಿಕ ಆ್ಯಪ್ ಅನ್ನು ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ @BSBommai ರವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ @RRK_Official_, @PuneethRajkumar ಮತ್ತಿತರರು ಉಪಸ್ಥಿತರಿದ್ದರು. pic.twitter.com/JsBfWGlFR2
— CM of Karnataka (@CMofKarnataka) August 16, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.