ಬೆಂಗಳೂರು: ಸಂಭಾವ್ಯ ಕೊರೋನಾ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಕೊರೋನಾ ತಾಂತ್ರಿಕ ತಜ್ಞರ ಸಮಿತಿ ರಚನೆ ಮಾಡುವಂತೆ ಅಧಿಸೂಚನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರು ಹೊರಡಿಸಿದ್ದಾರೆ.
ಈಗಾಗಲೇ ರಾಜ್ಯ ಕೊರೋನಾ ಮೊದಲನೆ ಅಲೆ ಮತ್ತು ಎರಡನೇ ಅಲೆಯ ಅನುಭವವನ್ನು ಹೊಂದಿದೆ. ಹಾಗೆಯೇ ಅಕ್ಟೋಬರ್ – ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಬರುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಜಿಲ್ಲಾ ಮಟ್ಟದಲ್ಲಿ ತಜ್ಞರ ಸಮಿತಿಯನ್ನು ರಚಿಸುವಂತೆ ಸೂಚಿಸಿದೆ ಎಂದು ಇಲಾಖೆ ಹೇಳಿದೆ.
ಹಾಗೆಯೇ ಈವರೆಗೆ ಕೇಂದ್ರ, ರಾಜ್ಯ ಸರ್ಕಾರಗಳು, ತಜ್ಞರು ತಿಳಿಸಿದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಸ್ಥಳೀಯವಾಗಿ ಕೊರೋನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ಈ ಸಮಿತಿ ಪ್ರತಿ 15 ದಿನಗಳಿಗೊಮ್ಮೆ ಸಭೆ ಸೇರಿ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವತ್ತ ಚಿತ್ತ ಹರಿಸುವಂತೆಯೂ ಈ ಆದೇಶದಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.