ನವದೆಹಲಿ: ದೇಶದ ಸುರಕ್ಷತೆ, ಭದ್ರತೆಗೆ ಧಕ್ಕೆ ತರುವ ಯಾವುದೇ ವಿಷಯವನ್ನು ಸರ್ಕಾರ ಬಹಿರಂಗಪಡಿಸಬೇಕಾಗಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ನೇತೃತ್ವದ ನ್ಯಾಯಪೀಠ ಈ ತೀರ್ಪು ನೀಡಿದೆ. ಪೆಗಾಸಸ್ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ಗೆ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳನ್ನು ವಿಚಾರಣೆ ನಡೆಸಿದ ಅವರು, ಆ ಬಳಿಕ ಈ ಗೊಂದಲಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಕೇಂದ್ರ ಸರ್ಕಾರದ ಪರ ವಕೀಲರು ಕೋರ್ಟ್ಗೆ ಮಾಹಿತಿ ನೀಡಿದ್ದು, ಪೆಗಾಸಸ್ ವಿಚಾರದಲ್ಲಿ ಮುಚ್ಚಿಡುವಂತಹ ವಿಚಾರಗಳೇನೂ ಇಲ್ಲ. ಅದು ದೇಶದ ಭದ್ರತೆಗೆ ಸಂಬಂಧಪಟ್ಟಿರುವುದು ಎಂದು ತಿಳಿಸಿದ್ದಾರೆ. ಹಾಗೆಯೇ ಈ ವಿಚಾರವನ್ನು ಸಾರ್ವಜನಿಕ ಚರ್ಚೆಯ ವಿಷಯವನ್ನಾಗಿ ಮಾಡಲು ಸಾಧ್ಯವಿಲ್ಲ. ದೇಶದ ಭದ್ರತೆಗೆ ಧಕ್ಕೆಯುಂಟು ಮಾಡುವ ಯಾವುದೇ ವಿಷಯವನ್ನು ಸಾರ್ವಜನಿಕ ಚರ್ಚೆಗೆ ಒಳಪಡಿಸುವುದಿಲ್ಲ. ಆದರೆ ಈ ಸಂಬಂಧ ಎಲ್ಲಾ ವಿಚಾರಗಳನ್ನು ಕೋರ್ಟ್ಗೆ ತಿಳಿಸಲಾಗುವುದು ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.