ನವದೆಹಲಿ: ದೇಶದ ಸ್ಥಳೀಯ ಕ್ರೀಡಾ ಪ್ರತಿಭೆಗಳನ್ನು ಉತ್ತೇಜಿಸಲು ದೇಶಾದ್ಯಂತ ಸುಮಾರು 1000 ಖೇಲೋ ಇಂಡಿಯಾ ಕೇಂದ್ರಗಳ ಸ್ಥಾಪನೆ ಮಾಡುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.
ಪ್ಯಾರಾ ಒಲಿಂಪಿಯನ್ಗಳು ಮತ್ತು ಅವರ ಪಾಲಕರು, ತರಬೇತುದಾರರ ಜೊತೆಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.
ಕೇಂದ್ರ ಸರ್ಕಾರ ಕ್ರೀಡಾಪಟುಗಳನ್ನು ತಲುಪಲು ಪ್ರಯತ್ನ ಮಾಡುತ್ತಿದೆ. ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳನ್ನು ತಲುಪುವ ನಿಟ್ಟಿನಲ್ಲಿ ವಿಶೇಷ ಪ್ರಯತ್ನ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಈಗಾಗಲೇ ದೇಶದಲ್ಲಿ 360 ಖೇಲೋ ಇಂಡಿಯಾ ಕೇಂದ್ರಗಳಿವೆ. ಈ ಸಂಖ್ಯೆಯನ್ನು 1000 ಕ್ಕೆ ಏರಿಕೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಕ್ರೀಡಾಪಟುಗಳು ದೇಶದ ಯಾವುದೇ ರಾಜ್ಯ, ಪ್ರದೇಶಗಳಿಗೆ ಸೇರಿದವರಾದರೂ, ಯಾವುದೇ ಭಾಷೆ ಮಾತನಾಡುವವರಾದರೂ ಅವರನ್ನು ತಲುಪುವ, ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನ ನಡೆಸುತ್ತದೆ. ನಾವು ಭಾರತೀಯ ಕ್ರೀಡಾಪಟುಗಳು ಎಂಬ ಭಾವನೆ ಬರುವಂತೆ ಮಾಡುವುದೇ ಸರ್ಕಾರದ ಉದ್ದೇಶ ಎಂದು ತಿಳಿಸಿದ್ದಾರೆ.
ದೇಶವು ಪದಕಕ್ಕಾಗಿ ಕ್ರೀಡಾಪಟುಗಳ ಮೇಲೆ ಒತ್ತಡ ಹೇರುವುದಿಲ್ಲ. ಬದಲಾಗಿ ಅತ್ಯುತ್ತಮ ಪ್ರದರ್ಶನ ಮಾತ್ರವೇ ಬಯಸುತ್ತದೆ. ಅವರ ಗೆಲುವು, ಸೋಲುಗಳಲ್ಲಿ ದೇಶವೇ ಅವರ ಜೊತೆಗಿದೆ ಎಂದು ಮೋದಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.