ಬೆಂಗಳೂರು: ಕನ್ನಡಿಗರಿಗೆ ಪ್ರಧಾನಿ ಮೋದಿ ಸಂಪುಟದಲ್ಲಿ ಸಿಂಹಪಾಲು ದೊರಕಿರುವುದು ಐತಿಹಾಸಿಕ ಸಂಗತಿ ಎಂದು ಕೇಂದ್ರ ಸಚಿವ ಭಗವಂತ್ ಖೂಬಾ ತಿಳಿಸಿದ್ದಾರೆ.
ಕಳೆದ ಹಲವು ವರ್ಷಗಳ ಅವಧಿಯಲ್ಲಿ ದೇಶವನ್ನು ಆಳುತ್ತಿದ್ದ ಸರ್ಕಾರ ತೆಗೆದುಕೊಳ್ಳಲಾಗದ ಐತಿಹಾಸಿಕ ನಿರ್ಧಾರಗಳನ್ನು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೇವಲ 7 ವರ್ಷಗಳಲ್ಲಿ ತೆಗೆದುಕೊಂಡಿದೆ. ಈ ಹಿಂದೆ ಸಮಾಜದ ತಳ ವರ್ಗಗಳಿಗೆ ಸಂಪುಟದಲ್ಲಿ ಸ್ಥಾನ ದೊರೆಯುತ್ತಿರಲಿಲ್ಲ. ಆದರೆ ಮೋದಿ ಅವರ ಸಂಪುಟದಲ್ಲಿ ಎಲ್ಲಾ ವರ್ಗಗಳಿಗೂ ಸಾಕಷ್ಟು ಸ್ಥಾನಮಾನ ದೊರೆತಿದೆ ಎಂದು ಅವರು ಹೇಳಿದ್ದಾರೆ.
ಈ ಎಲ್ಲ ನಡೆಗಳು ಕಾಂಗ್ರೆಸ್ ಪಕ್ಷದಲ್ಲಿ ಆತಂಕ ಸೃಷ್ಟಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ನೂತನ ಸಚಿವರನ್ನು ಪರಿಚಯಿಸುವುದಕ್ಕೂ ಸದನದಲ್ಲಿ ಕಾಂಗ್ರೆಸ್ ಅಡ್ಡಿ ಮಾಡಿದೆ. ಮೋದಿ ಸರ್ಕಾರ ಕಾಂಗ್ರೆಸ್ನ ಬಣ್ಣ ಬಯಲು ಮಾಡುತ್ತದೆ ಎಂಬ ಭೀತಿ ಕಾಂಗ್ರೆಸ್ ನಾಯಕರಿಗೆ ಇದೆ. ಚರ್ಚೆಗೆ ಯಾವುದೇ ವಿಷಯಗಳಿಲ್ಲದೇ ಇರುವಾಗ ಕಾಂಗ್ರೆಸ್ ಸಮಯ ವ್ಯರ್ಥ ಮಾಡುವ ಕೆಲಸವನ್ನು ಮಾಡುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.