ನವದೆಹಲಿ: ತಾಲೀಬಾನ್ ಉಗ್ರರ ಕೈವಶವಾಗಿರುವ ಅಫ್ಘಾನಿಸ್ಥಾನದಲ್ಲಿರುವ ಭಾರತೀಯರನ್ನು ವಾಪಾಸ್ಸು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸಿದ ಸಡೆಸಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ.
ವಿಶ್ವವೇ ಕೊರೋನಾ ಸಂಕಷ್ಟಕ್ಕೆ ತುತ್ತಾದಾಗ ವಿದೇಶಗಳಲ್ಲಿ ಸಿಲುಕಿದ್ದ ಭಾರತೀಯರನ್ನು ವಂದೇ ಭಾರತ್ ಮಿಷನ್ ಮೂಲಕ ಸ್ವದೇಶಕ್ಕೆ ಕರೆತರಲಾಗಿತ್ತು. ಈಗ ಅಫ್ಘಾನಿಸ್ಥಾನದಲ್ಲಿ ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದು, ಅವರನ್ನು ಭಾರತೀಯ ವಾಯುಪಡೆ, ಏರ್ ಇಂಡಿಯಾ ಸೇರಿದಂತೆ, ಸಾಧ್ಯವಿರುವ ಎಲ್ಲಾ ಮಾರ್ಗಗಳಿಂದ ಕರೆ ತರಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಕಳೆದ ಶುಕ್ರವಾರದಿಂದಲೇ ಅಫ್ಘಾನ್ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ. ನಿನ್ನೆ ವಾಯುಪಡೆಯ ವಿಮಾನದ ಮೂಲಕ 120 ಭಾರತೀಯರನ್ನು ಮರಳಿ ತಾಯ್ನಾಡಿಗೆ ಕರೆತರುವಲ್ಲಿ ಕೇಂದ್ರ ಸರ್ಕಾರ ಸಫಲವಾಗಿದೆ ಎಂದು ಅವರು ನುಡಿದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.