ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು, ನೌಕರರ ವರ್ಗಾವಣೆಯಲ್ಲಿ ಕೌನ್ಸೆಲಿಂಗ್ ಕಡ್ಡಾಯಗೊಳಿಸುವ ಮೂಲಕ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಇಲಾಖೆಯಲ್ಲಿನ ಅನಿಯಮಿತ ವರ್ಗಾವಣೆಯನ್ನು ತಡೆಯಲು, ಆಡಳಿತದಲ್ಲಿ ಪಾರದರ್ಶಕತೆ, ಶಿಸ್ತುಬದ್ಧ ವ್ಯವಸ್ಥೆ ತರುವ ನಿಟ್ಟಿನಲ್ಲಿ ಈ ಕ್ರಮ ಜಾರಿಗೆ ಅವರು ಸೂಚಿಸಿದ್ದಾರೆ. ಸಾರ್ವಜನಿಕರಿಗೆ ಯಾವುದೇ ತರದ ಸಮಸ್ಯೆ ಆಗದಂತೆ ಸಮರ್ಪಕ ಆರೋಗ್ಯ ಸೇವೆ ದೊರೆಯುವಂತಾಗಲು ಕಟ್ಟುನಿಟ್ಟಿನ ವ್ಯವಸ್ಥೆಗೆ ಅವರು ಸೂಚಿಸಿದ್ದಾರೆ.
ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ಒದಗಿಸುವ ನಿಟ್ಟಿನಲ್ಲಿ ಕಠಿಣ ಕ್ರಮದ ಅಗತ್ಯ ಇದೆ. ಪಾರದರ್ಶಕ ಮತ್ತು ನಿಗದಿತ ಕಾಲಮಿತಿಯಲ್ಲಿ ಸಕ್ಷಮ ಪ್ರಾಧಿಕಾರಗಳ ಮೂಲಕವೇ ವರ್ಗಾವಣೆ ಪ್ರಕ್ರಿಯೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಸಂಬಂಧ ಈಗಾಗಲೇ ಆದೇಶವನ್ನು ಹೊರಡಿಸಿರುವುದಾಗಿಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.