ಬೆಂಗಳೂರು: ರಾಜ್ಯ ಸರ್ಕಾರದ ಉದ್ಯೋಗಗಳಲ್ಲಿ ತೃತೀಯ ಲಿಂಗಿಗಳಿಗೆ 1% ಮೀಸಲಾತಿ ನೀಡುವುದಾಗಿ ಸರ್ಕಾರ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ, ಈ ನಿಯಮವನ್ನು ಸರ್ಕಾರಿ ಸ್ವಾಮ್ಯದ ಎಲ್ಲಾ ನಿಗಮ, ಮಂಡಳಿಗಳು, ಏಜೆನ್ಸಿಗಳಿಗೂ ಅನ್ವಯವಾಗುವಂತೆ ಜಾರಿಗೊಳಿಸಲು ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.
ಈ ಸಂಬಂಧ ಹೈಕೋರ್ಟ್ಗೆ ತೃತೀಯ ಲಿಂಗಿಗಳ ಪರ ಕಾರ್ಯ ನಿರ್ವಹಿಸುವ ಸಂಸ್ಥೆಯೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಈ ಆದೇಶವನ್ನು ಸರ್ಕಾರಿ ಸ್ವಾಮ್ಯದ ಎಲ್ಲಾ ನಿಗಮ, ಮಂಡಳಿ, ಏಜೆನ್ಸಿಗಳಿಗೂ ವಿಸ್ತರಣೆ ಮಾಡುವಂತೆ ಸೂಚಿಸಿದೆ.
ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರ ನ್ಯಾಯಾಲಯದ ನಿರ್ದೇಶನದ ಮೇರೆಗೆಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ ನೇಮಕಾತಿ) ನಿಯಮ 9 ಕ್ಕೆ ತಿದ್ದುಪಡಿ ತಂದಿತ್ತು. ಯಾವುದೇ ರೀತಿಯ ಸರ್ಕಾರಿ ಉದ್ಯೋಗಗಳಲ್ಲಿ ಎಲ್ಲಾ ವರ್ಗದ ತೃತೀಯ ಲಿಂಗಿಗಳಿಗೆ 1% ಮೀಸಲಾತಿಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.