ನವದೆಹಲಿ: ಅಫ್ಘಾನಿಸ್ಥಾನದಲ್ಲಿನ ತಾಲಿಬಾನ್ ಉಗ್ರಗಾಮಿಗಳ ಕೃತ್ಯಗಳು, ಅದರ ಬೆಳವಣಿಗೆಗಳ ಬಗ್ಗೆ ಭಾರತ ಎಚ್ಚರದಿಂದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ.
ಅಫ್ಘಾನಿಸ್ಥಾನ, ಕಾಬೂಲ್ನಲ್ಲಿ ಸಿಲುಕಿರುವ ಭಾರತೀಯರ ಭದ್ರತೆ ಮತ್ತು ಸುರಕ್ಷತೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೆಚ್ಚಿನ ಗಮನ ಹರಿಸಿದೆ ಎಂದು ಅವರು ಹೇಳಿದ್ದಾರೆ. ಎಲ್ಲರನ್ನೂ ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಅವರು ಈ ವಿಚಾರವನ್ನು ತಿಳಿಸಿದ್ದಾರೆ. ಈ ಸಭೆಯ 10 ದಿನಗಳಲ್ಲಿ 2 ದಿನಗಳನ್ನು ಅಫ್ಘನಿಸ್ಥಾನದ ಪರಿಸ್ಥಿತಿಯ ಅವಲೋಕನಕ್ಕೆ ಸಂಬಂಧಿಸಿದಂತೆಯೇ ನಡೆಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.