ನವದೆಹಲಿ: ಮುಂದಿನ ಸೆಪ್ಟೆಂಬರ್ ತಿಂಗಳಿನಿಂದ ಮಕ್ಕಳಿಗೂ ಕೊರೋನಾ ಲಸಿಕೆ ದೊರೆಯುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ನಿರ್ದೇಶಕಿ ಪ್ರಿಯಾ ಅಬ್ರಹಾಂ ತಿಳಿಸಿದ್ದಾರೆ.
2 ರಿಂದ 18 ವರ್ಷಗಳೊಳಗಿನ ಮಕ್ಕಳಿಗೆ ಸೆಪ್ಟೆಂಬರ್ ವೇಳೆ ಲಸಿಕೆಗಳು ದೊರೆಯಬಹುದು. ಈ ಸಂಬಂಧ ಪ್ರಾಯೋಗಿಕ ಪರೀಕ್ಷೆಗಳನ್ನು ದೇಶದಲ್ಲಿ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಎರಡನೇಯ ಮತ್ತು ಮೂರನೇ ಹಂತದ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಈ ಪ್ರಯೋಗದ ಫಲಿತಾಂಶಗಳು ಶೀಘ್ರದಲ್ಲೇ ಲಭ್ಯವಾಗಲಿವೆ. ಅವುಗಳನ್ನು ನಿಯಂತ್ರಕರಿಗೆ ನೀಡಲಾಗುತ್ತದೆ. ಸೆಪ್ಟೆಂಬರ್ ಬಳಿಕ ಮಕ್ಕಳಿಗೂ ಲಸಿಕೆ ದೊರೆಯಬಹುದು ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.