ನವದೆಹಲಿ: ವಿಶ್ವ ಮಟ್ಟದಲ್ಲಿ ಬದಲಾಗುತ್ತಿರುವ ಭೌಗೋಳಿಕ ರಾಜಕೀಯದ ಪರಿಸ್ಥಿತಿಗಳಿಂದ ದೇಶದ ಭದ್ರತಾ ಸವಾಲುಗಳು ಹೆಚ್ಚುತ್ತಿವೆ ಮತ್ತು ಸಂಕೀರ್ಣವಾಗುತ್ತಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದರು.
ಡಿಫೆನ್ಸ್ ಇಂಡಿಯಾ ಸ್ಟಾರ್ಟ್ಅಪ್ ಚಾಲೆಂಜ್ 5.0 ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ನಿಟ್ಟಿನಲ್ಲಿ ದೇಶದಲ್ಲಿ ಬಲವಾದ ಸಮರ್ಥ ಮತ್ತು ಸಂಪೂರ್ಣ ಸ್ವಾವಲಂಬಿ ರಕ್ಷಣಾ ಉದ್ಯಮದ ಅಗತ್ಯ ಇದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಹಿಡಿತ ಸಾಧಿಸಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಇತರೆಡೆಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗುತ್ತಿದೆ. ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಭದ್ರತಾ ಸನ್ನಿವೇಶಗಳು ಬದಲಾಗುತ್ತಿವೆ ಎಂದು ಅವರು ತಿಳಿಸಿದರು.
ಬದಲಾಗುತ್ತಿರುವ ಭದ್ರತಾ ಸನ್ನಿವೇಶಗಳನ್ನು ಗಮನದಲ್ಲಿಟ್ಟುಕೊಂಡು ಸಶಸ್ತ್ರ ಪಡೆಗಳ ಅಗತ್ಯತೆಗಳ ಪೂರೈಕೆಗೆ ದೇಶವು ಬಲವಾದ, ಸ್ವಾವಲಂಬಿ ರಕ್ಷಣಾ ಉದ್ಯಮವನ್ನು ಹೊಂದುವತ್ತ ಗಮನ ಹರಿಸಬೇಕಿದೆ ಎಂದು ಹೇಳಿದರು. ಇದಕ್ಕೆ ಖಾಸಗಿ ವಲಯದ ಸಹಕಾರವೂ ಅಗತ್ಯ ಎಂದು ಅವರು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.