ಬೆಂಗಳೂರು: ರಾಜ್ಯದಲ್ಲಿ ಮಾನಸಿಕ ಆರೋಗ್ಯ ಪ್ರಾಧಿಕಾರ ಆರಂಭಿಸಿ, ನಾಗರಿಕರಿಗೆ ಸಕಾಲದಲ್ಲಿ ಮತ್ತು ಪರಿಣಾಮಕಾರಿ ಮಾನಸಿಕ ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ.
ಈ ಬಗ್ಗೆ ಸಚಿವ ಜೆ. ಸಿ. ಮಾಧುಸ್ವಾಮಿ ಅವರು ಮಾಹಿತಿ ನೀಡಿದ್ದು, ಕೇಂದ್ರದ ಮಾನಸಿಕ ಆರೋಗ್ಯ ಕಾಯ್ದೆ (2017) ಕ್ಕೆ ಪೂರಕವಾಗಿ ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ರಕ್ಷಣಾ ನಿಯಮ (2021) ನ್ನು ಅನುಷ್ಠಾನ ಮಾಡಲು ಪ್ರಾಧಿಕಾರ ರಚನೆಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಬೆಂಗಳೂರಿನ ನಿಮ್ಹಾನ್ಸ್ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಈ ಸಮಿತಿ ರಚನೆ ಮಾಡಲಾಗಿದೆ ಎಂದು ಅವರು ಹೇಳಿದರು.
ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ವೃತ್ತಿಪರವಾಗಿ ಕಾರ್ಯ ನಿರ್ವಹಿಸಲು ನೋಂದಣಿ ಮಾಡಿಕೊಂಡಿರುವ ಕ್ಲಿನಿಕಲ್ ಸೈಕಾಲಾಜಿಸ್ಟ್ಗಳು, ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ತರಬೇತಿ ಪಡೆದ ದಾದಿಯರು, ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತರ ಪಟ್ಟಿಯನ್ನು ಪ್ರಕಟಿಸುವ ಜವಾಬ್ದಾರಿಯನ್ನು ಈ ಪ್ರಾಧಿಕಾರಕ್ಕೆ ವಹಿಸಲಾಗುವುದು ಎಂದು ಅವರು ತಿಳಿಸಿದರು.
ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಜನರ ಮಾನಸಿಕ ಆರೋಗ್ಯದ ಮೇಲೆಯೂ ಒತ್ತಡ ಬೀಳುವ ಸ್ಥಿತಿ ನಿರ್ಮಾಣವಾಗಿದೆ. ಈ ಒತ್ತಡ ಕಡಿಮೆ ಮಾಡಲು ಅವರಿಗೆ ಅನುಕೂಲ ಒದಗಿಸಿಕೊಡುವ ವೈದ್ಯಕೀಯ ಸಲಹೆಗಳಿಗಾಗಿ ಈ ಪ್ರಾಧಿಕಾರ ಕೆಲಸ ಮಾಡಲಿದೆ ಎಂದು ಅವರು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.