ಬೆಂಗಳೂರು: ರಾಜ್ಯದಲ್ಲಿ ಮೂರು ಅಲೆಮಾರಿ ಶಾಲೆಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದ್ದು, ಈ ಶಾಲೆಗಳು ಪ್ರಸಕ್ತ ವರ್ಷದಿಂದಲೇ ಕಾರ್ಯ ನಿರ್ವಹಿಸಲಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಇಂದು ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ದೇವರಾಜ ಅರಸು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ನಾಲ್ಕು ಅಲೆಮಾರಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಅದರಲ್ಲಿ ಎರಡು ಶಾಲೆಗಳಿಗೆ ಕಟ್ಟಡಗಳಿಲ್ಲ. ಅವುಗಳಿಗೆ ತಲಾ 6 ಕೋಟಿ ರೂ. ಗಳಂತೆ ಅನುದಾನ ಒದಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹಾಗೆಯೇ ಇನ್ನೂ ಮೂರು ಅಲೆಮಾರಿ ಶಾಲೆಗಳನ್ನು ಆರಂಭ ಮಾಡಲಾಗುತ್ತದೆ. ಈ ಸಂಬಂಧ ಈಗಾಗಲೇ ಬಜೆಟ್ನಲ್ಲಿಯೂ ಘೋಷಣೆ ಮಾಡಲಾಗಿದ್ದು, ಈ ವರ್ಷದಲ್ಲಿಯೇ ಶಾಲೆಗಳು ಕಾರ್ಯಾರಂಭ ಮಾಡಲಿವೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.