ನವದೆಹಲಿ: ವಿಶ್ವದ ಪ್ರಥಮ ಡಿಎನ್ಎ ಆಧಾರಿತ ಕೊರೋನಾ ಲಸಿಕೆ ಝೈಡಸ್ ಕ್ಯಾಡಿಲಾ ಸಂಸ್ಥೆಯ ಝೈಕೋವ್ ಡಿ ತುರ್ತು ಬಳಕೆಗೆ ಅನುಮೋದನೆ ದೊರೆತಿದ್ದು, ಈ ಲಸಿಕೆ ತಯಾರಿಕೆಯಲ್ಲಿ ಸಾಧನೆ ಮೆರೆದ ವಿಜ್ಞಾನಿಗಳ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಭಾರತೀಯ ವಿಜ್ಞಾನಿಗಳ ನೂತನ ಉತ್ಸಾಹಕ್ಕೆ ಇದು ಸಾಕ್ಷಿಯಾಗಿದೆ. ಇದು ನಿಜಕ್ಕೂ ಮಹತ್ವದ ಸಾಧನೆ ಎಂದು ತಿಳಿಸಿದ್ದಾರೆ.
ಈ ಲಸಿಕೆ ಸೂಜಿ ರಹಿತ ರಸಿಕೆಯಾಗಿದ್ದು, ಇದರ ಬಳಕೆಗೆ ಕೇಂದ್ರ ಸರ್ಕಾರ ತಜ್ಞರ ಶಿಫಾರಸ್ಸು ಬಂದ ಕೂಡಲೇ ಅನುಮೋದನೆ ನೀಡಿದೆ. ಈ ಲಸಿಕೆಯನ್ನು 28 ಸಾವಿರ ಜನರ ಮೇಲೆ ಪ್ರಯೋಗಿಸಿ ಪರೀಕ್ಷೆ ನಡೆಸಲಾಗಿದ್ದು, ಈ ವರದಿಯ ಆಧಾರದಲ್ಲಿ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡುವಂತೆ ಸಂಸ್ಥೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು.
India is fighting COVID-19 with full vigour. The approval for world’s first DNA based ‘ZyCov-D’ vaccine of @ZydusUniverse is a testimony to the innovative zeal of India’s scientists. A momentous feat indeed. https://t.co/kD3t7c3Waz
— Narendra Modi (@narendramodi) August 20, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.