ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಜೊತೆಗೆ ಶೈಕ್ಷಣಿಕ ವ್ಯವಸ್ಥೆಯ ಅಧಿಕಾರ ವಿಕೇಂದ್ರೀಕರಣ ಮಾಡುವುದಕ್ಕೆ ಸರ್ಕಾರ ಮಂದಾಗಿದೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಅತ್ಯುತ್ತಮವಾಗಿ ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಆರ್ಥಿಕ, ಶೈಕ್ಷಣಿಕ, ಆಡಳಿತಾತ್ಮಕ ಸ್ವಾಯತ್ತತೆ ನೀಡುವುದರ ಜೊತೆಗೆ, ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಶಿಕ್ಷಣಕ್ಕೆ ಸಂಬಂಧಿಸಿದಂತೆ ಆಯಾಯ ಸಂಸ್ಥೆಯನ್ನೇ ಉತ್ತರದಾಯಿಗಳನ್ನಾಗಿ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕ ವಲಯದಿಂದಲೂ ಶಿಕ್ಷಣ ಸಂಸ್ಥೆಗಳಿಗೆ ಶಕ್ತಿ ತುಂಬುವ ಕೆಲಸವಾಗಬೇಕು ಎಂದು ಅವರು ಹೇಳಿದ್ದಾರೆ.
ಶಿಕ್ಷಣ ಸಂಸ್ಥೆಗಳು ಸಮಾಜದ ಆಸ್ತಿ. ಅವುಗಳನ್ನು ಉಳಿಸುವುದು, ಬೆಳೆಸುವುದು ಜನರ ಕೈಯಲ್ಲೇ ಇದೆ. ಜನರ ನೇತೃತ್ವದ ಮೂಲಕವೇ ಶಿಕ್ಷಣ ಸಂಸ್ಥೆಗಳು ಬೆಳೆಯಬೇಕು. ಕೆಲವು ಶಿಕ್ಷಣ ಸಂಸ್ಥೆಗಳಿಗೆ ಸ್ವಾಯತ್ತತೆ ನೀಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.