ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರಿಂದ 9, 10,11 ಮತ್ತು 12 ನೇ ತರಗತಿಗಳ ಶಾಲಾರಂಭ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಮಾರ್ಗಸೂಚಿ ಹೊರಡಿಸಿದೆ.
ಈ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬೊಮ್ಮಾಯಿ, ರಾಜ್ಯದಲ್ಲಿ ಹಂತ ಹಂತವಾಗಿ ಶಾಲಾರಂಭ ಮಾಡಲಾಗುವುದು. ಮಕ್ಕಳನ್ನು ಮತ್ತೆ ಶಾಲೆಗಳತ್ತ ಕರೆತರುವ ನಿಟ್ಟಿನಲ್ಲಿ ಈ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಹಾಗೆಯೇ ಎಲ್ಲಾ ರೀತಿಯ ಕೊರೋನಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿಕೊಂಡು ಶಾಲೆಗಳ ಆರಂಭ ಮಾಡುವುದಾಗಿ ಅವರು ಹೇಳಿದ್ದಾರೆ.
ಶಾಲಾರಂಭಕ್ಕೆ ಈಗಾಗಲೇ ತಯಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಹಲವು ರೀತಿಯ ಸಲಹೆ ಸೂಚನೆಗಳನ್ನು ನೀಡಲಾಗಿದೆ. ಪೋಷಕರ ಸಮ್ಮತಿ ಪಡೆದು ಶಾಲೆಗೆ ಮಕ್ಕಳನ್ನು ಕರೆತರುವಂತೆ ಬೊಮ್ಮಾಯಿ ಸೂಚಿಸಿದ್ದಾರೆ. ಹಾಗೆಯೇ ಶಾಲೆಗಳಲ್ಲಿ ಸ್ಯಾನಿಟೈಸೇಶನ್ ಪ್ರಕ್ರಿಯೆ ನಡೆಸುವಂತೆಯೂ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಹಾಗೆಯೇ ಶಾಲೆಗೆ ಬರುವ ಮಕ್ಕಳ ಮೇಲೆ ವಿಶೇಷ ನಿಗಾ ವಹಿಸುವಂತೆ ಅವರು ಪೋಷಕರಿಗೂ ಸೂಚಿಸಿದ್ದಾರೆ. ಹಾಗೆಯೇ ಪೋಷಕರು ವ್ಯಾಕ್ಸಿನ್ ಪಡೆದುಕೊಳ್ಳುವಂತೆಯೂ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಇನ್ನೆರಡು ದಿನಗಳಲ್ಲಿ ಕೆಲವು ತರಗತಿಗಳಿಗೆ ಶಾಲೆ ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ಮಾನ್ಯ ಮುಖ್ಯಮಂತ್ರಿ @BSBommai ರವರು ಇಂದು ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ;#KarnatakaFightsCorona #United2FightCorona pic.twitter.com/scvgZDH2dQ
— CM of Karnataka (@CMofKarnataka) August 21, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.