ಬೆಂಗಳೂರು: ಬೆಸ್ಟ್ ಏರ್ಪೋರ್ಟ್ ಸ್ಟಾಫ್ಸ್ ಇನ್ ಇಂಡಿಯಾ ಮತ್ತು ಸೆಂಟ್ರಲ್ ಏಷ್ಯಾ ಪುರಸ್ಕಾರಕ್ಕೆ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿ ಭಾಜನರಾಗಿದ್ದಾರೆ.
ಈ ಪುರಸ್ಕಾರವನ್ನು ಸ್ಕೈ ಟ್ರ್ಯಾಕ್ಸ್ ವರ್ಲ್ಡ್ ಏರ್ಪೋರ್ಟ್ ಅವಾರ್ಡ್ ಸಂಸ್ಥೆ ನೀಡಿದೆ.
ಕೊರೋನಾ ಸಂಕಷ್ಟದ ಅವಧಿಯಲ್ಲಿ ವಿಮಾನಯಾನ ಉದ್ಯಮ ತೀರಾ ಸಂಕಷ್ಟಕ್ಕೆ ಈಡಾಗಿದೆ. ಈ ಸಂದರ್ಭದಲ್ಲಿ ಸಿಬ್ಬಂದಿ ಸಲ್ಲಿಸಿದ ಸೇವೆಗೆ ಈ ಪುರಸ್ಕಾರ ದೊರೆತಿದ್ದು, ಇದು ಮಹತ್ವಪೂರ್ಣವಾದುದು ಎಂದು ನಿಲ್ದಾಣದ ಅಧಿಕೃತ ಪ್ರಕಟಣೆಗಳು ತಿಳಿಸಿವೆ.
ಈ ಪುರಸ್ಕಾರ ಪ್ರಯಾಣಿಕರ ವೋಟಿಂಗ್ ಆಧರಿಸಿ ನೀಡಲಾಗುತ್ತದೆ. ನಿಲ್ದಾಣದ, ಸಿಬ್ಬಂದಿಗಳ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.