ಕಾಬೂಲ್: ತಾಲೀಬಾನ್ ಉಗ್ರರ ಕೈವಶವಾಗಿರುವ ಅಫ್ಘಾನಿಸ್ಥಾನದ ರಾಜಧಾನಿ ಕಾಬೂಲ್ನಿಂದ 85 ಭಾರತೀಯರನ್ನು ಹೊತ್ತ ಭಾರತೀಯ ವಾಯುಪಡೆಯ ವಿಮಾನ ಸಿ – 130 ಇಂದು ಮುಂಜಾನೆ ಸಂಚಾರ ಆರಂಭಿಸಿದೆ.
ಅಫ್ಘನಿಸ್ಥಾನದಲ್ಲಿರುವ ಭಾರತೀಯರ ರಕ್ಷಣೆಗೆ ಭಾರತ ಪ್ರಯತ್ನ ನಡೆಸುತ್ತಿದ್ದು, ಇದರ ಭಾಗವಾಗಿ 85 ಮಂದಿ ಭಾರತೀಯರನ್ನು ದೇಶಕ್ಕೆ ಮರಳಿ ಕರೆತರಲಾಗುತ್ತಿದೆ. ಈ ವಿಮಾನ ಇಂಧನ ತುಂಬಿಸಿಕೊಳ್ಳಲು ತಜಕಿಸ್ಥಾನದಲ್ಲಿ ಇಳಿದಿದೆ ಎಂದು ಮೂಲಗಳು ತಿಳಿಸಿವೆ.
ಸರ್ಕಾರದ ಸಂಘಟಿತ ಪ್ರಯತ್ನದಲ್ಲಿ ಭಾರತೀಯ ವಾಯುಪಡೆಯ ವಿಮಾನ ಸುರಕ್ಷಿತವಾಗಿ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ಪ್ರಯತ್ನ ಮಾಡುತ್ತಿದೆ. ಈ ಹಿಂದೆ ಭಾರತೀಯ ವಾಯುಪಡೆಯ ಎರಡು ವಿಮಾನಗಳು ಅಮೆರಿಕದ ಭದ್ರತಾ ಪಡೆಗಳಿಂದ ಕ್ಲಿಯರೆನ್ಸ್ ಪಡೆದು ಪತ್ರಕರ್ತರು, ಐಟಿಬಿಪಿ ಸಿಬ್ಬಂದಿ ಸೇರಿದಂತೆ 180 ಅಧಿಕಾರಿಗಳನ್ನು ಭಾರತಕ್ಕೆ ಕರೆತಂದಿದ್ದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.