ನವದೆಹಲಿ: ಕೇಂದ್ರ ಸರ್ಕಾರ ನೀಡುವ ಎಲ್ಲಾ ರೀತಿಯ ಸುಮಾರು 3.15 ಕೋಟಿ ವಿದ್ಯಾರ್ಥಿ ವೇತನಗಳನ್ನು ಅಕ್ಟೋಬರ್ ತಿಂಗಳಿನಿಂದ ಡಿಜಿಟಲೀಕರಣಗೊಳಿಸಲಾಗುವುದು ಎಂದು ಮೂಲಗಳು ಹೇಳಿವೆ.
ಪರಿಶಿಷ್ಟ ಜಾತಿ ಮತ್ತು ಇತರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 2.5 ಕೋಟಿ ರೂ. ವಿದ್ಯಾರ್ಥಿ ವೇತನವನ್ನು ಒದಗಿಸಲಾಗಿರುವುದಾಗಿಯೂ ಕೇಂದ್ರ ಸರ್ಕಾರ ಹೇಳಿದೆ. ಹಾಗೆಯೇ ಈ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸುವ ನಿಟ್ಟಿನಲ್ಲಿ ಪೋರ್ಟಲ್ ಅನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದೆ.
ಈ ಡಿಜಿಟಲ್ ಪೋರ್ಟಲ್ ಮೂಲಕವೇ ವಿಕಲಚೇತನರ ಸಬಲೀಕರಣ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಶಿಕ್ಷಣ, ಬುಡಕಟ್ಟು ವ್ಯವಹಾರಗಳು ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ವಿದ್ಯಾರ್ಥಿ ವೇತನವನ್ನು ನೀಡಲಿವೆ. ಈ ಪೋರ್ಟಲ್ ವಿದ್ಯಾರ್ಥಿ ವೇತನ ಪಡೆಯುವ ಪ್ರಕ್ರಿಯೆಗಳನ್ನು ಸರಳಗೊಳಿಸಿದೆ ಎಂದು ಸರ್ಕಾರದ ಮೂಲಗಳು ಹೇಳಿವೆ. ನಿಜವಾದ ಫಲಾನುಭವಿಗಳಿಗೆ ವಿದ್ಯಾರ್ಥಿ ವೇತನ ತಲುಪುವ ನಿಟ್ಟಿನಲ್ಲಿಯೂ ಈ ಕ್ರಮ ಮಹತ್ವ ಪಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.