ಬೆಂಗಳೂರು: ರಾಜ್ಯ ಸರ್ಕಾರವು ಬೆಂಗಳೂರಿನ ಶಿವಾಜಿ ನಗರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಅನ್ನು ಆರಂಭ ಮಾಡಲಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದ 100 ಸೀಟುಗಳ ಜೊತೆಗೆ ಬಿ ಎಸ್ಸಿ ನರ್ಸಿಂಗ್ ಕೋರ್ಸ್ ಆರಂಭ ಮಾಡಲಿದೆ.
ಈ ಕೇಂದ್ರವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಜೊತೆಗೆ ಸಂಯೋಜಿತವಾಗಿರಲಿದೆ. ಈ ಸಂಬಂಧ ಕರ್ನಾಟಕ ಸರ್ಕಾರ ಆದೇಶ ಪ್ರತಿ ಹೊರಡಿಸಿದ್ದು, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಅಧಿನಿಯಮ 1994 ರ ಕಲಂ 45(5) ರಡಿಯಲ್ಲಿ ಈ ಕೇಂದ್ರ ತೆರೆಯುವುದಾಗಿ ಹೇಳಿದೆ. ಹಾಗೆಯೇ 2021 – 22 ನೇ ಸಾಲಿನಿಂದ 100 ಸೀಟುಗಳ ಮಿತಿಯುಳ್ಳ ಬಿಎಸ್ಸಿ ನರ್ಸಿಂಗ್ ಕೋರ್ಸ್ ಅನ್ನು ಹೊಸದಾಗಿ ಪ್ರಾರಂಭಿಸಲು ಅನುಮೋದನೆ ನೀಡಿರುವುದಾಗಿ ತಿಳಿಸಿದೆ.
ಈ ಕೋರ್ಸ್ ಅನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಅನುಮೋದನೆ ಪಡೆದ ಬಳಿಕ, ನಿಗದಿ ಮಾಡಿದಷ್ಟೇ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಂಡು ಆರಂಭಿಸುವಂತೆಯೂ ಸರ್ಕಾರ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ. ಹಾಗೆಯೇ ರಾಜಿ ಸರ್ಕಾರ ಮತ್ತು ವಿವಿ ಗಳು ಕಾಲಕಾಲಕ್ಕೆ ಪ್ರಕಟಿಸುವ ಸೂಚನೆಗಳನ್ನು ಪಾಲಿಸುವಂತೆಯೂ ಸರ್ಕಾರ ತಿಳಿಸಿದೆ.
ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಗುಣಾತ್ಮಕ ಹಾಗೂ ಸಂಖ್ಯಾತ್ಮಕ ಬದಲಾವಣೆ ತರುವ ಹಾದಿಯಲ್ಲಿ ಇದು ಮತ್ತೊಂದು ಹೆಜ್ಜೆಯಾಗಲಿದೆ.
ಬೆಂಗಳೂರಿನಲ್ಲಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜು ಪ್ರಾರಂಭಿಸಲು ಅನುಮತಿ ನೀಡಲಾಗಿದ್ದು, ಇದೇ 2021-22ನೇ ಶೈಕ್ಷಣಿಕ ಸಾಲಿನಿಂದ ಕಾರ್ಯಾರಂಭ ಮಾಡಲಿದೆ.
ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಗುಣಾತ್ಮಕ ಹಾಗೂ ಸಂಖ್ಯಾತ್ಮಕ ಬದಲಾವಣೆ ತರುವ ಹಾದಿಯಲ್ಲಿ ಇದು ಮತ್ತೊಂದು ಹೆಜ್ಜೆಯಾಗಲಿದೆ.@BSBommai pic.twitter.com/CEAqbhXkhg
— Dr Sudhakar K (@mla_sudhakar) August 21, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.