ಬೆಂಗಳೂರು: ಇಂದಿನಿಂದ ತೊಡಗಿದಂತೆ ರಾಜ್ಯದಲ್ಲಿ 9 – 12 ನೇ ತರಗತಿಗಳು ಭೌತಿಕವಾಗಿ ಆರಂಭವಾಗುತ್ತಿದ್ದು, ಈ ನಿಟ್ಟಿನಲ್ಲಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಆತ್ಮವಿಶ್ವಾಸ ತುಂಬುವಂತೆ ಸಚಿವರುಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಕೊರೋನಾ ಹಿನ್ನೆಲೆಯಲ್ಲಿ ಈ ವರೆಗೂ ಆನ್ಲೈನ್ ತರಗತಿಗಳ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಾಗುತ್ತಿತ್ತು. ಆದರೆ ಇಂದಿನಿಂದ 9, 10, 11 ,12 ನೇ ತರಗತಿಗಳಿಗೆ ಎಲ್ಲಾ ರೀತಿಯ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಶಾಲಾರಂಭ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರಿಗೆ ಆತ್ಮವಿಶ್ವಾಸ ತುಂಬುವಂತೆ ಅವರು ಸಚಿವರುಗಳಿಗೆ ಸೂಚಿಸಿದ್ದಾರೆ.
ಸಚಿವರುಗಳು ಶಾಲೆಯಲ್ಲಿ ಕೈಗೊಳ್ಳಲಾದ ಕೊರೋನಾ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಆ ಮೂಲಕ ಪಾಲಕರು, ಪೋಷಕರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು. ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಸಹ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಸೂಚಿಸಬೇಕು ಎಂದು ಅವರು ತಿಳಿಸಿದ್ದಾರೆ. ಹಾಗೆಯೇ ಯಾವ ಆತಂಕವೂ ಇಲ್ಲದೆ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸುವ ಮೂಲಕ ಸರ್ಕಾರಕ್ಕೆ ಸಹಕಾರ ನೀಡುವಂತೆಯೂ ಬೊಮ್ಮಾಯಿ ತಿಳಿಸಿದ್ದಾರೆ.
Children of classes 9, 10 and PUC get back to their schools & colleges from tomorrow. I urge my cabinet colleagues to visit the campuses in their districts, encourage students, teachers and review the precautionary measures taken for the safe conduct of physical classes. (1/2)
— CM of Karnataka (@CMofKarnataka) August 22, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.